ನಮ್ಮ ಮೆಟ್ರೋ ಬೆಂಗಳೂರು ಜನರ ಜೀವನಾಡಿಯಾಗಿದೆ. ಸುಗಮ ಮತ್ತು ವೇಗದ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಪ್ರತಿನಿತ್ಯ 8 ಲಕ್ಷ ಜನರು ಸಂಚರಿಸುತ್ತಾರೆ ಎಂದು ವರದಿಯಾಗಿದೆ. ನಮ್ಮ ಮೆಟ್ರೋದ ಈ ಮಾರ್ಗದಲ್ಲಿ ಈ ನಿಲ್ದಾಣಗಳ ನಡುವೆ ಇಂದು ಸಂಚಾರ ಬಂದ್ ಇರಲಿದೆ.
ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಕೈಗೊಳ್ಳಲಾಗಿದೆ. ಹೀಗಾಗಿ ಇಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಯು ಸಂಪೂರ್ಣ ಬಂದ್ ಆಗಿರಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಇದೇ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ಮತ್ತು ಸೆಪ್ಟೆಂಬರ್ 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.