ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪೊಲೀಸ್ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ಶೀಟ್ನಲ್ಲಿ ಕೊಲೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪೊಲೀಸರು ದಾಖಲಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಳಿಗೆ ಕಳುಹಿಸಿದ ಹಾಗೇ ಇಬ್ಬರು ಸ್ಯಾಂಡಲ್ವುಡ್ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ಅಂತ ಚಾರ್ಜ್ಶೀಟ್ನಲ್ಲಿ ಹೆಸರನ್ನೂ ಕೂಡ ಉಲ್ಲೇಖ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿತ್ತು.
ಎ 14 ಆರೋಪಿ ಪ್ರದೋಶ್ ಸ್ವ-ಇಚ್ಚಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಲಾಗಿದೆ. ಆ ಇಬ್ಬರು ನಟಿಯರಿಗೂ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ದರ್ಶನ್ ಆತನ ಮೊಬೈಲ್ ತೆಗೆದು ಪ್ರದೂಶ್ಗೆ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಮೊಬೈಲ್ ಅನ್ನು ಪ್ರದೂಶ್ ನೋಡಿದ್ದ. ಆ ವೇಳೆ ಸ್ಯಾಂಡಲ್ವುಡ್ ನಟಿ ಶುಭಾ ಪೂಂಜಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಪ್ರದೂಶ್ ಹೇಳಿಕೆ ನೀಡಿದ್ದಾನೆ ಅಂತಾ ಪೊಲೀಸರು ಉಲ್ಲೇಖ ಮಾಡಿದ್ದಾರೆ.
ಆದರೆ ಇದೇ ವಿಚಾರಕ್ಕೆ ನಟಿ ಶುಭಾ ಪೂಂಜಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಕ್ಲಾರಿಟಿ ಕೊಟ್ಟಿದ್ದಾರೆ. ರೇಣುಕಾಸ್ವಾಮಿಯವರ ಸಂದೇಶದ ವಿಚಾರವಾಗಿ ಬೆಳಿಗ್ಗೆಯಿಂದ ನನಗೆ ಕರೆ ಮಾಡಿದ ನನ್ನ ಎಲ್ಲಾ ಆತ್ಮೀಯ ಮಾಧ್ಯಮ ಮಿತ್ರರಿಗೆ ಸ್ಪಷ್ಟಪಡಿಸಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಗೆ ಯಾವುದೇ ಸಂದೇಶಗಳು ಬಂದಿಲ್ಲ ಎಂದಿದ್ದಾರೆ. ಆದರೆ ಈ ಬಗ್ಗೆ ಮತ್ತೊಬ್ಬ ಸ್ಯಾಂಡಲ್ವುಡ್ ನಟಿ ಸ್ಪಷ್ಟನೆ ನೀಡಿಲ್ಲ.