ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ವಿದೇಶಗಳಲ್ಲಿ ತೀವ್ರ ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆ ಇಳಿದಿದೆ. ಇಂದು ಮಧ್ಯಾಹ್ನದೊಳಗೆ ಭಾರತದಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಇದೆ. ಎಂಸಿಎಕ್ಸ್ ಬೆಲೆ ಈಗಾಗಲೇ ಜಂಪ್ ಆಗಿದೆ. ಗ್ರಾಮ್ಗೆ 14 ರುಪಾಯಿ ಏರಿಕೆ ಆಗಬಹುದು. ಆದರೆ, ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಯ ವಹಿವಾಟಿನಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 10 ರುಪಾಯಿ ಕಡಿಮೆ ಆಗಿರುವುದು ತಿಳಿದುಬಂದಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,040 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,040 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,390 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,040 ರುಪಾಯಿ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,140 ರುಪಾಯಿ
- ಬೆಳ್ಳಿ ಬೆಲೆ 10 ಗ್ರಾಂಗೆ: 839 ರುಪಾಯಿ