ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗುತ್ತಿದ್ದು, ಕ್ರಮೇಣವಾಗಿ ಬಿಸಿಲಿನ ಝಳ ಹೆಚ್ಚಾಗತೊಡಗಿದೆ. ಮೊದಲೆಲ್ಲಾ ಮಳೆಗಾಲ ನಿಂತ ಬಳಿಕ ಸ್ವಲ್ಪ ದಿನಗಳ ಕಾಲ ತಂಪಾದ ವಾತಾವರಣವಿರುತ್ತಿತ್ತು ಆದರೆ ಈಗ ಮಳೆ ಕಡಿಮೆಯಾಗುತ್ತಿದ್ದಂತೆ ತಾಪಮಾನ ಹೆಚ್ಚಳವಾಗುತ್ತಿದೆ. ಕರ್ನಾಟಕದ ಬಹುತೇಕ ಕಡೆಗಳಲ್ಲಿ ಒಣಹವೆ ಇರಲಿದ್ದು, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲಿ ಬಿಸಿಲಿರಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ