ಜಾತಿನಿಂದನೆ ಮತ್ತು ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಗುತ್ತೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ವಿಜೆಪಿ ಶಾಸಕ ಮುನಿರತ್ನ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಪ್ರೀಢಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.
ಮಹಿಳಾ, ದಲಿತ ವಿರೋಧಿ ಶಾಸಕನನ್ನು ಕಿತ್ತೊಗೆಯಿರಿ, ಮುನಿರತ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮೋಹನ್ ದಾಸರಿ ಅವರು, ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾಡನಾಡುವ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ ? ದಲಿತ ಸಮುದಾಯದವರ ಬಳಿ ಬಿಜೆಪಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬಬೇಕೆಂದು ಒತ್ತಾಯಿಸಿದರು.