ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿತ್ತು. ಐಎಫ್ ಆರ್ ಆಗುತ್ತಿದ್ದಂತೆಯೇ ಜಾನಿ ಮಾಸ್ಟರ್ ತಲೆಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ತಂಡ ರಚನೆ ಮಾಡಲಾಗಿತ್ತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಜಾನಿಯನ್ನು ಹೈದ್ರಾಬಾದ್ ಪೊಲೀಸರು ಬಂಧನ ಮಾಡಿದ್ದಾರೆ. ಈ ವಿಷ್ಯ ಗೊತ್ತಾಗುತ್ತಿದ್ದಂತೆಯೇ ಜಾನಿ ಮಾಸ್ಟರ್ ಪತ್ನಿ ಆಯೇಷಾ ಪೊಲೀಸ್ ಸ್ಟೇಶನ್ ಗೆ ಬಂದು ಗಂಡನ ಬಂಧನದ ಬಗ್ಗೆ ವಿಚಾರಿಸಿದ್ದಾರೆ. ನನ್ನ ಗಂಡನನ್ನು ನೋಡಬೇಕು ಅಂತ ಹೈಡ್ರಾಮಾ ಮಾಡಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್ ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಇತ್ತೀಚೆಗಷ್ಟೇ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 21 ವರ್ಷದ ಯುವತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು.
ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರ ಈ ಸುದ್ದಿ ಟಾಲಿವುಡ್ನಲ್ಲಿ ಸಂಚಲನ ಮೂಡಿಸುತ್ತಿದೆ. ಜಾನಿ ತನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ನೃತ್ಯ ನಿರ್ದೇಶಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಯದುರ್ಗಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾನಿ ಮಾಸ್ಟರ್ ಅನೇಕ ಸ್ಟಾರ್ ಹೀರೋ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನೇಕ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಧೀ, ಡ್ಯಾನ್ಸ್ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್ ಈಗ ಟಾಲಿವುಡ್ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ. ಟಾಲಿವುಡ್ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿಯ ಅನೇಕ ಸಿನಿಮಾಗಳಿಗೆ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಇದೀಗ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ.
ಜಾನಿ ವಿರುದ್ಧ ಕ್ರಮಕ್ಕೆ ವಾಣಿಜ್ಯ ಮಂಡಳಿ ನಿರ್ಧಾರ:
ಜಾನಿ ಮಾಸ್ಟರ್ ಪೂರ್ತಿ ಹೆಸರು ಶಾಯಿಕ್ ಜಾನಿ ಭಾಷಾ. ಇತ್ತೀಚೆಗೆ ನಡೆದ ಎಪಿ ಚುನಾವಣೆಯಲ್ಲಿ ಜನಸೇನಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜಾನಿ ಕೆಲಸ ಮಾಡಿದ್ದರು. ಆದರೆ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜನಸೇನಾ ಹೇಳಿಕೆ ಬಿಡುಗಡೆ ಮಾಡಿದೆ. ಮತ್ತೊಂದೆಡೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಜಾನಿ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ.