ತಿರುಮಲ ಲಡ್ಡು ವಿಚಾರ ರಾಜಕೀಯವಾಗಿ ಚರ್ಚೆಗೆ ಕಾರಣವಾಗುತ್ತಿದೆ. ಜಗನ್ ಆಡಳಿತ ಅವಧಿಯಲ್ಲಿ ಲಡ್ಡು ತಯಾರಿಕೆಗೆ ಪ್ರಾಣೀಗಳ ಕೊಬ್ಬು ಬಳಸಲಾಗುತ್ತಿತ್ತು ಎಂಬ ಮುಖ್ಯಮಂತ್ರಿ ಚಂದ್ರಬಾಬು ಹೇಳಿಕೆ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ.
ಚಂದ್ರಬಾಬು ಅವರ ಹೇಳಿಕೆ ಕೋಟ್ಯಂತರ ಹಿಂದೂಗಳಲ್ಲಿ ಆತಂಕ ಮೂಡಿಸಿದೆ. ತಿರುಮಲ ಲಡ್ಡುವಿನ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆಯೇ. ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಲಾಗುತ್ತಿತ್ತೇ? ಎಂಬ ಅನುಮಾನಗಳು ಶುರುವಾಗಿವೆ. ಅಲ್ಲದೇ ಕೋಟ್ಯಾಂತರ ತಿಮ್ಮಪ್ಪನ ಭಕ್ತರು ಬೆಚ್ಚಿಬಿದ್ದಿದ್ದಾರೆ. ಟಿಡಿಪಿಯಿಂದ ಒಳಒಪ್ಪಂದದ ಆರೋಪಗಳು ಬರುತ್ತಿದ್ದರೆ, ಅವರನ್ನು ಗುರಿಯಾಗಿಸುವ ಶಡ್ಯಂತ್ರ ಎಂದು ವೈಎಸ್ಆರ್ ಕಾಂಗ್ರೆಸ್ ಹೇಳ್ತಿದೆ. ಈ ಬೆನ್ನಲ್ಲೇ ವೈಎಸ್ಆರ್ ಕಾಂಗ್ರೆಸ್ ಮಹತ್ವದ ನಿರ್ಧಾರ ಕೈಗೊಂಡಿದೆ. ತಮ್ಮ ಮೇಲಿನ ಆರೋಪಗಳ ವಿರುದ್ಧ ಕಾನೂನು ಹೋರಾಟ ನಡೆಸಲು ಮುಂದಾಗಿದೆ.
ತಿರುಮಲ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ವೈಎಸ್ಆರ್ ಹೈಕೋರ್ಟ್ ಮೊರೆ ಹೋಗಿದೆ. ಈ ಕುರಿತು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹಾಲಿ ನ್ಯಾಯಾಧೀಶರು ಅಥವಾ ನ್ಯಾಯಾಲಯ ನೇಮಿಸಿದ ಸಮಿತಿಯಿಂದ ತನಿಖೆ ನಡೆಸುವಂತೆ ಜಗನ್ ಪಕ್ಷ ಒತ್ತಾಯಿಸಿದೆ. ಇನ್ನು ಮುಂದಿನ ಬುಧವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.