ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಸಹೋದರ ಮುಮ್ತಾಜ್ ಆಲಿ (53) ನಾಪತ್ತೆಯಾಗಿದ್ದಾರೆ. ಮಂಗಳೂರು ನಗರದ ಹೊರವಲಯದ ಕುಳೂರು ಸೇತುವೆ ಮೇಲೆ ಅವರು ಪ್ರಯಾಣಿಸುವ ಕಾರು ಪತ್ತೆಯಾಗಿದೆ.
ಬೆಳಗ್ಗೆ 3 ಗಂಟೆಗೆ ಮುಮ್ತಾಜ್ ಆಲಿ ಮನೆಯಿಂದ ಹೊರಟಿದ್ದರು. BMW XY ಕಾರು ನಿಲ್ಲಿಸಿ ಮುಮ್ತಾಜ್ ನಾಪತ್ತೆ ಆಗಿದ್ದಾರೆ. ಬೆಳಗ್ಗೆ 5 ಗಂಟೆಗೆ ಕುಳೂರು ಸೇತುವೆಯ ಮೇಲೆ ಕಾರು ಪತ್ತೆ ಆಗಿದೆ. ಅವರ ನಾಪತ್ತೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ನದಿಯಲ್ಲಿ SDRF, NDRF, ಅಗ್ನಿಶಾಮಕ ದಳದಿಂದ ಶೋಧಕಾರ್ಯ ನಡೆಸಲಾಗುತ್ತಿದೆ. ನಿಂತಿರುವ ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿದೆ.
ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಅವರು ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದಾರೆ. ಕಮೀಷನರ್ ಮುಂದೆ ಕಣ್ಣೀರು ಮೊಹಿಯುದ್ದೀನ್ ಬಾವಾ ಕಣ್ಣೀರು ಇಟ್ಟಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್.. ಮುಂಜಾನೆ ಮೂರು ಗಂಟೆಗೆ ಮನೆಯಿಂದ ಕೆಲ ಕಾರಣಗಳಿಂದ ಬಿಎಂಡಬ್ಲೂ ಕಾರು ಚಲಾಯಿಸಿಕೊಂಡು ಬಂದಿದ್ದರು. ಕುಳೂರು ಸೇತುವೆಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೇತುವೆ ಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಕುಟುಂಬದಿಂದ ಕೆಲ ಮಾಹಿತಿಗಳು ಬಂದಿವೆ. ಘಟನೆಯ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಅಗರ್ವಾಲ್ ಮಾಹಿತಿ ನೀಡಿದ್ದಾರೆ.