ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ಕೆಲಸಗಳಿಗೆ 2 ತಿಂಗಳು ಗಡುವು ನೀಡ ಲಾಗುತ್ತಿದ್ದು, ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಎಲ್ಲ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜತೆಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಮೀನಮೇಷ ಎಣಿಸು ವುದು ಸರಿಯಲ್ಲ. ನವೆಂಬರ್ ಅಂತ್ಯದವರೆಗೆ ಗಡುವು ನೀಡ ಲಾಗಿದ್ದು, ಈ ಅವಧಿಯಲ್ಲೂ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂ ರಾಗದಿದ್ದರೆ ನೋಟಿಸ್ ಜಾರಿ ಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಅರ್ಹ ಭೂಹೀನರಿಗೆ ಜಮೀನು ಮಂಜೂರು ಮಾಡ ಬೇಕೆಂಬುದು ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯಡಿ ಬಗರ್ ಹುಕುಂ ಅರ್ಜಿ ಆಹ್ವಾನಿಸ ಲಾಯಿತು. 1 ವರ್ಷದಿಂದ ನಾನೇ ಖುದ್ದಾಗಿ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ನಡೆಸಿ ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದ್ದೇನೆ. ಆದರೂ ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ ಎಂದರು.