ಭಾರತೀಯ ಚುನಾವಣಾ ಆಯೋಗವು ಕರ್ನಾಟಕದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಹೀಗಾಗಿ ರಾಜ್ಯದ ಮೂರು ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ತಯಾರಿ ಪ್ರಾರಂಭಿಸಿವೆ. ಬಹು ನಿರೀಕ್ಷಿತ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗಿದೆ. 2 ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳೇ ಕಣಕ್ಕೆ ಇಳಿಯುವ ಸಾಧ್ಯತೆಗಳು ಹೆಚ್ಚಿವೆ. ಮೂವರು ರಾಜಕಾರಣಿಗಳ ಮಕ್ಕಳು ಅಭ್ಯರ್ಥಿಗಳಾಗುವ ಸಾಧ್ಯತೆಯಿದೆ.
ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಸಂಸದರಾಗಿದ್ದರು. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳು ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಉಪ ಚುನಾವಣೆ ಘೋಷಣೆ ಮಾಡಿ ದಿನಾಂಕ ಪ್ರಕಟ ಮಾಡಿದೆ. ನವೆಂಬರ್ 13 ಕ್ಕೆ ಮತದಾನ ಹಾಗೂ ನವೆಂಬರ್ 23 ಕ್ಕೆ ಫಲಿತಾಂಶ ಹೊರ ಬೀಳಲಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ (2023) ಈ ಮೂರು ಕ್ಷೇತ್ರಗಳ ಪೈಕಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಂದನ್ನು ಗೆದ್ದಿತ್ತು. ಸದ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಬಿಜೆಪಿ ಜೆಡಿಎಸ್ ಮೇಲುಗೈ ಸಾಧಿಸಿದ್ದು, ಉಪ ಚುನಾವಣೆಯನ್ನು ಗೆದ್ದು ಕಾಂಗ್ರೆಸ್ ಸೇಡು ತೀರಿಸಿಕೊಳ್ಳಬೇಕು ಎಂದುಕೊಂಡಿದೆ. ಇತ್ತ ಮೈತ್ರಿ ಪಕ್ಷಗಳು ಮೂರು ಸ್ಥಾನಗಳನ್ನು ತಮ್ಮದಾಗಿಸಿಕೊಳ್ಳಬೇಕು ಎಂದುಕೊಂಡಿವೆ. ಹೀಗಾಗಿ ಮೂರು ಪಕ್ಷಗಳಿಗೂ ಈ ಉಪ ಚುನಾವಣೆ ಮಹತ್ವದ್ದಾಗಿದೆ.
ಬಿಜೆಪಿ, ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳು
ಚನ್ನಪಟ್ಟಣ – ನಿಖಿಲ್ ಕುಮಾರಸ್ವಾಮಿ (ಜೆಡಿಎಸ್), ಎಂಎಲ್ಸಿ ಸಿಪಿ ಯೋಗೇಶ್ವರ್ (ಬಿಜೆಪಿ) ಹಾಗೂ ಸ್ಥಳೀಯ ಜೆಡಿಎಸ್ ಮುಖಂಡ ಸಾಧ್ಯತೆ.
ಶಿಗ್ಗಾಂವಿ – ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಮಾಜಿ ಸಚಿವ ಮುರುಗೇಶ ನಿರಾಣಿ, ಸ್ಥಳೀಯ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಗಂಗಾಧರ ಸಾತಣ್ಣವರ, ಶಿವಾನಂದ ಮ್ಯಾಗೇರಿ, ಶಿವಪ್ರಸಾದ ಸುರಗಿಮಠ.
ಸಂಡೂರು– ಮಾಜಿ ಸಚಿವ ಬಿ.ಶ್ರೀರಾಮುಲು, ಕಳೆದ ಧಾನಸಭಾ ಕ್ಷೇತ್ರದ ಕೆಆರ್ಪಿಪಿ ಪರಾಜಿತ ಅಭ್ಯರ್ಥಿ ಕೆ.ಎಸ್.ದಿವಾಕರ್, ಮಾಜಿ ಸಂಸದ ವೈ.ದೇವೇಂದ್ರಪ್ಪ. ಅಭ್ಯರ್ಥಿಗಳು
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಅಂತೆಯೇ ವಿಧಾನಸಭಾ ಉಪ ಚುನಾವಣೆಯೂ ಮೈತ್ರಿ ಮುಂದುವರೆಯಲಿದೆ. ಈ ಬಗ್ಗೆ ಎರಡೂ ಪಕ್ಷದ ಹಿರಿಯ ನಾಯಕರು ಹಲವು ಭಾರೀ ಹೇಳಿಕೆ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿಗಳೇ ಮೂರು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಿದ್ದಾರೆ.