ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರ ಹೋಗಿದ್ದಾರೆ. ವಾಸ್ತವವಾಗಿ, ವಿಕೆಟ್ ಕೀಪಿಂಗ್ ಮಾಡುವಾಗ ಪಂತ್ ಈ ಗಾಯಕ್ಕೆ ಒಳಗಾಗಿದ್ದು ಅವರ ಗಾಯದ ತೀವ್ರತೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದೀಗ ಪಂತ್ ಬದಲಿಗೆ ಧೃವ್ ಜುರೇಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.