ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ಇಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ತಮ್ಮ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಸುದೀಪ್ ಅವರ ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಇತ್ತೀಚೆಗೆ ನಟ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯ ಸಮಸ್ಯೆ ಹೆಚ್ಚಾದ ಕಾರಣ ಕೂಡಲೇ ಖಾಸಗಿ ಆಸ್ಪತ್ರೆಗೆ ಸೇರಿಸಲಾಯ್ತು. ಆದರೀಗ, ಚಿಕಿತ್ಸೆಗೆ ಸ್ಪಂದಿಸದೇ ಇಂದು ನಿಧನರಾಗಿದ್ದಾರೆ. ಈ ಸುದ್ದಿ ಕಿಚ್ಚು ಸುದೀಪ್ ಮತ್ತವರ ಆಪ್ತರಿಗೆ ಭಾರೀ ಆಘಾತ ನೀಡಿದೆ.
ಇದನ್ನು ಓದಿ : ಅಯ್ಯೋ.. ಕುಸಿದು ಬಿಳ್ತಿದ್ರಾ ನಟ ದರ್ಶನ್..?
ಇಂದು ಮಧ್ಯಾಹ್ನ 12 ಗಂಟೆಗೆ ಜೆಪಿ ನಗರದ ಸುದೀಪ್ ಅವರ ಮನೆಗೆ ತಾಯಿ ಸರೋಜಾ ಅವರ ಮೃತದೇಹ ತರಲಾಗಿತ್ತು. ಅಲ್ಲೇ ಕಲಾವಿದರಿಗೆ, ರಾಜಕೀಯ ಗಣ್ಯರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಜೀವ ಬಿಟ್ಟ ತಾಯಿಯನ್ನು ನೋಡಿ ನಟ ಸುದೀಪ್ ಅವರು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಈ ಫೋಟೋ ನೋಡಿದ್ರೆ ಯಾರಿಗಾದ್ರೂ ಕರುಳು ಚುರುಕ್ ಅನ್ನುತ್ತೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.