ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಇದು ಸಾಧ್ಯತೆಯ ಕಲೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಷರತ್ತು ವಿಧಿಸದೇ ಯೋಗೇಶ್ವರ್ ಪಕ್ಷವನ್ನು ಸೇರಿದ್ದಾರೆ ಎಂದು ತಿಳಿಸಿದರು.
ಇಂದು ಬೆಳಗ್ಗೆ 8 ಗಂಟೆಗೆ ಯೋಗೇಶ್ವರ್ ನಮ್ಮ ಮನೆಗೆ ಬಂದು ನನ್ನನ್ನು ಭೇಟಿ ಮಾಡಿದರು. ಸಾಕಷ್ಟು ವಿಚಾರ ಚರ್ಚೆ ಮಾಡಿದರು. ನಾನು ಕಾಂಗ್ರೆಸ್ನಲ್ಲಿ ಇದ್ದವನು ಮುಂದೆ ಕಾಂಗ್ರೆಸ್ ನಲ್ಲಿ ಇರಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದರು. ಈ ವಿಚಾರವನ್ನು ತಕ್ಷಣವೇ ಸಿಎಂ, ಪಕ್ಷದ ವರಿಷ್ಟರ ಗಮನಕ್ಕೆ ತಂದೆ ಎಂದು ಹೇಳಿದರು.
ಇದನ್ನೂ ಓದಿ: ರಾಮಾಯಣ’ದ ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಫೈನಲ್?
ಚನ್ನಪಟ್ಟಣ ಉಪಚುನಾವಣೆ ಘೋಷಣೆಯಾದ ಬಳಿಕ ಡಿಕೆ ಶಿವಕುಮಾರ್ ನಾವು ಅಚ್ಚರಿಯ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದಿದ್ದರು. ಕೊನೆ ಹಂತದಲ್ಲಿ ಡಿಕೆ ಸುರೇಶ್ ಹೆಸರು ಬಂದಿತ್ತು. ಆದರೆ ಅಧಿಕೃತವಾಗಿ ಯಾವುದೇ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿರಲಿಲ್ಲ.
ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು.
ಇದನ್ನೂ ಓದಿ: ಆಪರೇಷನ್ ಆಲ್ ಔಟ್; ಡಿಕೆಶಿ ಶಪಥ..!
ಸಿಪಿ ಯೋಗೇಶ್ವರ್ ಅವರನ್ನು ಜೆಡಿಎಸ್ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು. ಆದರೆ ಡಿಕೆ ಬ್ರದರ್ಸ್ ಮಿಡ್ನೈಟ್ ಆಪರೇಷನ್ ಮಾಡಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.