2ನೇ ಟೆಸ್ಟ್ ಪಂದ್ಯದ 2ನೇ ದಿನ ನ್ಯೂಜಿಲೆಂಡ್ ಬೌಲರ್ಗಳ ಆರ್ಭಟಕ್ಕೆ ತತ್ತರಿಸಿರುವ ಭಾರತ ತಂಡ ಕೇವಲ 107 ರನ್ ಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದ್ದ ಭಾರತ ತಂಡ ಇಂದು ಕೇವಲ 91ರನ್ ಗಳ ಅಂತರದಲ್ಲಿ 6 ವಿಕೆಟ್ಗಳನ್ನು ಕಳೆದುಕೊಂಡಿದೆ.
ಭಾರತ ಇನ್ನೂ 152 ರನ್ ಗಳ ಹಿನ್ನಡೆಯಲ್ಲಿದೆ. ಭಾರತದ ಪರ ಯಶಸ್ವಿ ಜೈಸ್ವಾಲ್ ಮತ್ತು ಶುಭ್ ಮನ್ ಗಿಲ್ ತಲಾ 30ರನ್ ಗಳಿಸಿ ಔಟಾದರೆ ವಿರಾಟ್ ಕೊಹ್ಲಿ ಮತ್ತೆ ಕೇವಲ 1 ರನ್ ಗಳಿಸಿ ಔಟಾಗಿ ನಿರಾಶೆ ಮೂಡಿಸಿದರು.
ಕೊಹ್ಲಿ ಔಟಾಗುತ್ತಿದ್ದಂತೆಯೇ ಭಾರತ ತಂಡದ ಮಧ್ಯಮ ಕ್ರಮಾಂಕ ದಿಢೀರ್ ಕುಸಿತ ಕಂಡಿತು. ರಿಷಬ್ ಪಂತ್ 18 ರನ್ ಗಳಿಸಿ ಔಟಾದರೆ, ಸರ್ಫರಾಜ್ ಖಾನ್ 11, ಆರ್ ಅಶ್ವಿನ್ 4 ರನ್ ಗಳಿ ಔಟಾದರು. ಭೋಜನ ವಿರಾಮದ ವೇಳೆಗೆ ಭಾರತ ತಂಡ 7 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ. 11 ರನ್ ಗಳಿಸಿರುವ ರವೀಂದ್ರ ಜಡೇಜಾ ಮತ್ತು 2 ರನ್ ಗಳಿಸಿರುವ ವಾಷಿಂಗ್ಟನ್ ಸುಂದರ್ ಕ್ರೀಸ್ ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್ ಪರ ಮೆಚೆಲ್ ಸ್ಯಾಂಥ್ನರ್ 4 ವಿಕೆಟ್, ಗ್ಲೇನ್ ಫಿಲಿಪ್ಸ್ 2 ಮತ್ತು ಟಿಮ್ ಸೌಥಿ 1 ವಿಕೆಟ್ ಪಡೆದಿದ್ದಾರೆ.