ಕೆ.ಹೆಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಹೇಳಿಕೆ ನೀಡಿದ್ದು, ಕೋಲಾರ ಕಾಂಗ್ರೆಸ್ ನಾಯಕರಿಗೆ ತಲೆಬಿಸಿ ತರಿಸಿದೆ. ವಿಧಾನಸೌಧದ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ನಂತರ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ಮದು. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದು, ನಾನು, ರಮೇಶ್ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.