ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಿವಾಸ, ಈಗ ಪವರ್ ಸೆಂಟರ್ ಆಗಿದೆ. ಸಾಲುಸಾಲು ಬಿಜೆಪಿ ನಾಯಕರು ಹೆಚ್ ಡಿಕೆ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಉಡುಪಿ -ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ, ಬಿಜೆಪಿ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಜೆ ಪಿ ನಗರದ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.