ದೇಶದಲ್ಲಿ ಮತ್ತೆ ಜನಗಣತಿ ವಿಷಯ ಮುನ್ನೆಲೆಗೆ ಬಂದಿದೆ. ದೇಶದ ಜನ ಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಸರ್ಕಾರ 2025ರಲ್ಲಿ ಆರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಈ ಪ್ರಕ್ರಿಯೆಯು 2025 ರಲ್ಲಿ ಆರಂಭಗೊಂಡು 2026 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿಯ ನಂತರ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಕೆಲಸ ಆರಂಭಗೊಂಡು 2028ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ: ದೇವೇಗೌಡರ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು?
ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡನೆ ಆಗಲಿದ್ದು ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದೆ. ಲೋಕಸಭಾ ಪುನರ್ ವಿಂಗಡನೆಯೊಂದಿಗೆ ಮಹಿಳಾ ಮೀಸಲಾತಿ ಸಹ ಜಾರಿಗೆ ಬರಲಿದೆ.