ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕಟಣದಲ್ಲಿ ಇಡಿ ಅಧಿಕಾರಿಗಳು ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ದಾಳಿ ಮಾಡಿದೆ.
ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇತ್ತ ಪ್ರಕರಣದ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವಾಗ ಇಡಿ ದಾಳಿ ಆಗುತ್ತೋ ಎನ್ನುವ ಆತಂಕದಲ್ಲಿದ್ದಾರೆ.
ಇದನ್ನೂ ಓದಿ: ನಿಖಿಲ್ ಪರ ಯದುವೀರ್ ಕ್ಯಾಂಪೇನ್!
ಇಂದು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ಇಡಿ ದಾಳಿ ಮಾಡಿದೆ. ಇದರ ಜೊತೆಗೆ ಈಗ ಬೆಂಗಳೂರಿನ ಮಲ್ಲೇಶ್ವರಂನ 10ನೇ ಕ್ರಾಸ್ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸದ ಮೇಲೂ ಸಹ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಟೇಶ್ ಮನೆಯಲ್ಲೇ ಇದ್ದ ಸಂದರ್ಭದಲ್ಲಿ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ