ರಾಜಧಾನಿ ಬೆಂಗಳೂರಿನಲ್ಲಿ ರೌಡಿಶೀಟರ್, ಸುಪಾರಿ ಕಿಲ್ಲರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾರೆ. ಕಮ್ಮನಹಳ್ಳಿಯ ಓಯೋ ಹೋಟೆಲ್ ರೂಂನಲ್ಲಿ ಸ್ನೇಹಿತರ ಜೊತೆ ರೌಡಿಶೀಟರ್ ದಿನೇಶ್ ಉಳಿದುಕೊಂಡಿದ್ದ, ರೂಂನ ಬಿಲ್ ಕೊಡುವ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಏಳು ಮಂದಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.