ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 1ರವರೆಗೆ ವಿಸ್ತರಿಸಿದೆ. ಎಎಪಿ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಅವರ ವಿಚಾರಣೆಗೆ 7 ದಿನಗಳ ಕಸ್ಟಡಿಗೆ ಇಡಿ ಕೋರಿತ್ತು. ಆದರೆ ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ನ್ಯಾಯಾಲಯ ಹೇಳಿತ್ತು. ಇಂದು ಕಸ್ಟಡಿ ಅವಧಿ ಕೊನೆಗೊಳ್ಳುತ್ತಿದ್ದಂತೆಯೇ, ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಇಡಿ ಹಾಜರುಪಡಿಸಿತು.