ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜನಪ್ರಿಯ ಸೆಲೆಬ್ರಿಟಿ ಜೋಡಿ ಆಗಿದ್ದಾರೆ. ಮದುವೆಯಾದಾಗಿನಿಂದಲೂ ಇಬ್ಬರೂ ತಮ್ಮ ವೈಯಕ್ತಿಕ ಜೀವನವನ್ನು ತುಂಬಾ ಖಾಸಗಿಯಾಗಿ ಇಟ್ಟುಕೊಂಡಿದ್ದಾರೆ. ಹೆಚ್ಚು ವೈಯಕ್ತಿಕ ವಿಚಾರಗಳನ್ನು ಶೇರ್ ಮಾಡಲ್ಲ. ಮಕ್ಕಳ ಮುಖವನ್ನು ಕೂಡ ರಿವೀಲ್ ಮಾಡದ ಅನುಷ್ಕಾ. ಇಂದು ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ತನ್ನ ಇಬ್ಬರು ಮಕ್ಕಳ ಮೊದಲ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ತಮ್ಮ ಇಬ್ಬರು ಮಕ್ಕಳ ಫೋಟೋವನ್ನು ವಿರಾಟ್ ಜೊತೆ ಹಂಚಿಕೊಂಡಿದ್ದಾರೆ. ಫೋಟೋಗಳಿಗೆ ಲೈಕ್ಗಳ ಸುರಿಮಳೆ ಆಗ್ತಿದೆ.
ಅನುಷ್ಕಾ ಶೇರ್ ಮಾಡಿರುವ ಫೋಟೋದಲ್ಲಿ ಮಗಳು ವಾಮಿಕಾ ಮತ್ತು ಮಗ ಅಕಾಯ್ ವಿರಾಟ್ ಹಿಡಿದಿರುವುದನ್ನು ಕಾಣಬಹುದು. ಈ ಫೋಟೋದಲ್ಲಿ ವಿರಾಟ್ ಫ್ಯಾಮಿಲಿ ಮ್ಯಾನ್ ಆಗಿ ಕಾಣಿಸಿಕೊಂಡಿದ್ದಾರೆ. ವಿರಾಟ್ ಅಕಾಯ್ ನನ್ನು ಬೇಬಿ ಕ್ಯಾರಿಯರ್ ನಲ್ಲಿ ಹಿಡಿದಿದ್ದಾರೆ. ಇನ್ನೊಂದು ಕೈಯಲ್ಲಿ ವಾಮಿಕಾ ಇದ್ದು, ವಿರಾಟ್ ಫುಲ್ ಖುಷಿಯಾಗಿ ಪೋಸ್ ಕೊಟ್ಟಿದ್ದಾರೆ. ಆದ್ರೆ ಇಲ್ಲೂ ಅನುಷ್ಕಾ ಮಕ್ಕಳ ಮುಖವನ್ನು ಮರೆ ಮಾಚಿದ್ದಾರೆ. ಇದು ಅಭಿಮಾನಿಗಳಲ್ಲಿ ಕೊಂಚ ಬೇಸರ ಮೂಡಿಸಿದೆ.