ಇದೇ ತಿಂಗಳು ನವೆಂಬರ್ 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಎಷ್ಟೇ ಕಷ್ಟ ಆದ್ರೂ ಪರ್ವಾಗಿಲ್ಲ ಆಸೀಸ್ ಸರಣಿ ಗೆಲ್ಲಲೇಬೇಕು ಎಂದು ಸಜ್ಜಾಗಿರೋ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರನ್ನು ರೆಡಿ ಮಾಡುತ್ತಿದೆ.
ಸುಮಾರು 24 ವರ್ಷಗಳ ಬಳಿಕ ಟೆಸ್ಟ್ ಸರಣಿಯಲ್ಲಿ ತವರಿನಲ್ಲೇ ಭಾರತ ತಂಡವನ್ನು ನ್ಯೂಜಿಲೆಂಡ್ 3-0 ಅಂತರದಿಂದ ಸೋಲಿಸಿ ದಾಖಲೆ ನಿರ್ಮಿಸಿದೆ. 3 ಪಂದ್ಯಗಳಲ್ಲೂ ಹೀನಾಯವಾಗಿ ಸೋತ ಭಾರತ ಮೊದಲ ಬಾರಿಗೆ ವೈಟ್ವಾಶ್ ಆಗಿದೆ. 1969ರ ನಂತರ ಟೀಮ್ ಇಂಡಿಯಾ ತವರಿನಲ್ಲಿ ಒಂದೇ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳು ಸೋತಿರುವುದು ಇದೇ ಮೊದಲು.
ಹೀನಾಯ ಸೋಲಿನ ಬೆನ್ನಲ್ಲೇ ಬಿಸಿಸಿಐ ಸೆಲೆಕ್ಷನ್ ಕಮಿಟಿ ಅಧ್ಯಕ್ಷ ಅಜಿತ್ ಅಗರ್ಕರ್, ಕ್ಯಾಪ್ಟನ್ ರೋಹಿತ್ ಶರ್ಮಾ, ಮುಖ್ಯ ಕೋಚ್ ಗೌತಮ್ ಗಂಭೀರ್ ಸಭೆ ನಡೆಸಿ ಸುದೀರ್ಘ ಚರ್ಚೆ ಮಾಡಿದ್ರು. ಹೇಗಾದ್ರೂ ಮಾಡಿ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಟೀಂ ಇಂಡಿಯಾ ಅರ್ಹತೆ ಪಡೆಯಬೇಕು ಎಂದು ಚರ್ಚಿಸಿದ್ರು. ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಗೆಲ್ಲಲೇಬೇಕು. ಅದರಲ್ಲೂ 4 ಪಂದ್ಯ ಗೆದ್ರೆ ಮಾತ್ರ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಪ್ರವೇಶ ಸಿಗಲಿದೆ. ಈ ಹೊತ್ತಲ್ಲೇ ಟೀಮ್ ಇಂಡಿಯಾಗೆ ಶಾಕಿಂಗ್ ನ್ಯೂಸ್ ಒಂದಿದೆ.
ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಭಾರೀ ಬದಲಾವಣೆ ಆಗಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಈಗಾಗಲೇ ಮೊದಲ ಟೆಸ್ಟ್ಗೆ ತಮ್ಮ ಅಲಭ್ಯತೆ ಬಗ್ಗೆ ಹಿಟ್ಮ್ಯಾನ್ ಹಿಂಟ್ ನೀಡಿದ್ದಾರೆ.
ಭಾರತದ ಆಸ್ಟ್ರೇಲಿಯಾ ಪ್ರವಾಸ ನವೆಂಬರ್ 22 ರಿಂದ ಪರ್ತ್ನಲ್ಲಿ ಶುರುವಾಗಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್ನಲ್ಲಿ ಆಡುವುದಿಲ್ಲ ಎನ್ನಲಾಗುತ್ತಿದೆ. ಯಶಸ್ವಿ ಜೈಸ್ವಾಲ್ ಬದಲಿಗೆ ಅಭಿಮನ್ಯು ಈಶ್ವರನ್ ಇನ್ನಿಂಗ್ಸ್ ಆರಂಭಿಸಬಹುದು. ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ತಿಳಿದು ಬಂದಿದೆ. ರೋಹಿತ್ ಅಲಭ್ಯತೆಯಲ್ಲಿ ಟೀಮ್ ಇಂಡಿಯಾವನ್ನು ಬುಮ್ರಾ ಅಥವಾ ಕೊಹ್ಲಿ ಮುನ್ನಡೆಸಬಹುದು ಎಂದು ಹೇಳಲಾಗುತ್ತಿದೆ.
ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ (ಸಿ), ಆಕಾಶ್ ದೀಪ್.