ಮೈಸೂರು: ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸುತ್ತಿದ್ದಂತೆ ಪೊಲೀಸರು ಬಂಧಿಸಲು ಯತ್ನಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಇದನ್ನು ಓದಿ: ಚಿಟಿಕೆ ಹೊಡೆದು ದರ್ಶನ್ಗೆ ಎಚ್ಚರಿಸಿದ ಜಗದೀಶ್!
ಪೊಲೀಸರ ತಂಡವು ಶಾಸಕ ಟಿ.ಎಸ್ ಶ್ರೀವತ್ಸ, ಎಲ್ ನಾಗೇಂದ್ರ ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಮೇಯರ್ ಶಿವಕುಮಾರ್ ನಿಂತಿದ್ದ ಪಕ್ಷದ ವಾಹನವನ್ನೇ ಸಿಎಆರ್ ಮೈದಾನಕ್ಕೆ ಕಳುಹಿಸಿದರು. ಇದೇ ವೇಳೆ ಕಾರ್ಯಕರ್ತರನ್ನು ಪೊಲೀಸ್ ಬಸ್ ಮೂಲಕ ಕರೆದೊಯ್ಯಲಾಯಿತು.