ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ಅವರ ವಿರುದ್ಧ ಕ್ರಿಮಿನಲ್ ಕೇಸ್ ಗಳಿವೆ ಎಂದಿದ್ದ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ. ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಯತೀಂದ್ರ ಅಮಿತ್ ಶಾರನ್ನು ಗೂಂಡಾ ಎಂದು ಕರೆದಿದ್ದು, ಶಾ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಆರೋಪಿಸಿದ್ದರು. ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಈ ಸಂಬಂಧ ಯತೀಂದ್ರ ವಿರುದ್ಧ ಬಿಜೆಪಿ ದೂರು ನೀಡಿದೆ.