ದೇಶದಲ್ಲೀ ಭಾರೀ ಕುತೂಹಲ ಕೆರಳಿಸಿದ್ದ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಇಂದು ತೆರೆ ಬೀಳಲಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಹಾಗೂ ಇದರ ಜೊತೆಗೆ ನಡೆದಿರುವ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಶನಿವಾರ (ಇಂದು) ಪ್ರಕಟವಾಗಲಿದ್ದು, ದೇಶದಲ್ಲಿ ಈಗಾಗಲೇ ಈ ಫಲಿತಾಂಶದತ್ತ ಎಲ್ಲ ಚಿತ್ತ ನೆಟ್ಟಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ನ ವಿಧಾನಸಭೆಗಳಿಗೆ, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರದ ಒಂದು ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ ಎಂಬುದರ ಕ್ಷಣ ಕ್ಷಣದ ಮಾಹಿತಿ ನಿಮ್ಮ ಗ್ಯಾರಂಟಿ ನ್ಯೂಸ್ನಲ್ಲಿ ನೋಡ್ತಾ ಇರಿ..