ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವು ಸಾಧಿಸಿದೆ. ಐಪಿಎಲ್ 2024ರ ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದು ಬೀಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿ ಸೋಲಿನ ರುಚಿ ಕಂಡಿದೆ. ವಿಶಾಖಪಟ್ಟಣದ ಡಾ. ವೈಎಸ್ ರಾಜಶೇಖರರೆಡ್ಡಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಬೃಹತ್ ಮೊತ್ತ ಕಲೆ ಹಾಕಿತು.ಡೇವಿಡ್ ವಾರ್ನರ್ ಮತ್ತು ರಿಷಭ್ ಪಂತ್ ಅವರ ಅರ್ಧಶತಕಗಳ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆ ಹಾಕಿತು.ಇನ್ನು, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ಗೆ ಆರಂಭಿಕ ಆಘಾತ ಎದುರಿಸಿತು. ನಾಯಕ ರುತುರಾಜ್ ಗಾಯಕ್ವಡ್ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ರಚಿನ್ ರವೀಂದ್ರ 12 ಎಸೆತದಲ್ಲಿ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಅಜಿಂಕ್ಯಾ ರಹಾನೆ 30 ಎಸೆತದಲ್ಲಿ 45 ರನ್ ಸಿಡಿಸಿದರೆ, ಡ್ಯಾರಿಯಲ್ ಮಿಚೆಲ್ 20 ಎಸೆತದಲ್ಲಿ 34 ರನ್ ಸಿಡಿಸಿದರು. ಶಿವಂ ದುಜಬೆ 18 ರನ್ ಹಾಗೂ ಸಮೀರ್ ರಿಜ್ವಿ ಶೂನ್ಯಕ್ಕೆ ಔಟ್ ಆದರು.
ರವೀಂದ್ರ ಜಡೇಜಾ 21 ರನ್ ಮತ್ತು ಧೋನಿ 16 ಎಸೆತದಲ್ಲಿ 37 ರನ್ ಸಿಡಿಸಿದರು. ಕೊನೆಯ 6 ಎಸೆತದಲ್ಲಿ ಚೆನ್ನೈ ಗೆಲುವಿಗೆ 41 ರನ್ ಅವಶ್ಯಕತೆ ಇತ್ತು. ಮೊದಲ ಎಸೆತ ಬೌಂಡರಿ, ಎರಡನೇ ಎಸೆತ ಸಿಕ್ಸರ್ ಸಿಡಿಸಿದ ಧೋನಿ ಮೂರನೆ ಎಸೆತದಲ್ಲಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ನಾಲ್ಕನೇ ಎಸೆತದಲ್ಲಿ ಬೌಂಡರಿ ಸಿಡಿಸಿದರೆ, 5ನೇ ಎಸೆತದಲ್ಲಿ ರನ್ ಬರಲಿಲ್ಲ. ಕೊನೆಯ ಎಸೆತವನ್ನು ಮತ್ತೆ ಸಿಕ್ಸರ್ ಸಿಡಿಸಿದ ಧೋನಿ ಸೋಲಿನ ಅಂತರವನ್ನು 20 ರನ್ಗೆ ಕಡಿತಗೊಳಿಸಿದರು. ಅಂತಿಮ ಓವರ್ನಲ್ಲಿ ಧೋನಿ 20 ರನ್ ಸಿಡಿಸಿದರು. ಡೆಲ್ಲಿ 20 ರನ್ ಗೆಲುವು ದಾಖಲಿಸಿತು. ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದ ಮೂಲಕ ವಿಂಟೇಜ್ ಧೋನಿಯ ದರ್ಶನವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧೋನಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.ಇವರ ಹೋರಾಟದ ನಡುವೆಯೂ ಸಿಎಸ್ಕೆ ಸೋಲು ಕಂಡಿತು.ಡೆಲ್ಲಿಯ ಮುಕೇಶ್ ಮೂರು ವಿಕೆಟ್ ಪಡೆದು ಮಿಂಚಿದರು.