ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ : ಅನುರಾಧಾ, ಮಾಸ : ಕಾರ್ತಿಕ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಸೌಭಾಗ್ಯ, ಕರಣ : ವಣಿಜ, ಸೂರ್ಯೋದಯ: ಬೆಳಗ್ಗೆ 6:40 ಗಂಟೆ, ಸೂರ್ಯಾಸ್ತ: ಸಂಜೆ 6 ಗಂಟೆ, ಶುಭಾಶುಭಕಾಲ : ರಾಹು ಕಾಲ 1:46 – 3:10, ಯಮಘಂಡ ಕಾಲ 06:41 – 08:06, ಗುಳಿಕ ಕಾಲ 09:31 – 10:56
ಮೇಷ ರಾಶಿ : ಇಂದು ಇನ್ನೊಬ್ಬರನ್ನು ನೋಡಿ ಬದುಕುವುದಕ್ಕಿಂತ ನಿಮ್ಮನ್ನೇ ನೋಡಿದರೆ ಒಳ್ಳೆಯದು. ನೀವು ಇಂದು ಸ್ನೇಹಿತನ ನಂಬಿಕೆಯ ಯಾರಿಗೋ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ನೀವು ನಿರೀಕ್ಷಿಸಿದ್ದ ಸಮಸ್ಯೆಯು ಬಾರದೇ ಹೋದೀತು. ಖಾಸಗಿಯ ಕೆಲಸವು ನಿಮಗೆ ಸಾಕೆನಿಸಬಹುದು. ಬಂಧುಗಳಿಂದ ಮಾನಸಿಕ ಹಿಂಸೆಯಾಗುವುದು. ಕೆಲಸದಲ್ಲಿ ಬದಲಾವಣೆಯು ನಿಮಗೆ ಬೇಕಾದೀತು. ಅಧಿಕಾರಿಗಳ ಪ್ರಶಂಸೆಯು ನಿಮ್ಮ ಕಾರ್ಯಕ್ಕೆ ಬಲವು ಬರಬಹುದು. ನಿಮ್ಮ ಕಾರ್ಯವನ್ನು ಇಂದೇ ಮುಗಿಸುವ ಚಿಂತೆಯಲ್ಲಿ ಇರುವಿರಿ. ಇಂದಿನ ಹಣಕಾಸಿನ ಹರಿವು ನಿಮಗೆ ಸಂತೋಷವನ್ನು ಕೊಡಬಹುದು. ಧನ ಸಂಪಾದನೆಗೆ ಅವಕಾಶಗಳು ನಿಮಗೆ ಸಿಗಬಹುದು. ಇಂದು ಕಾರ್ಯದಲ್ಲಿ ಸ್ವಲ್ಪ ಒತ್ತಡವು ಇರಲಿದೆ. ನಿಮಗೆ ಕೊಟ್ಟ ಸಣ್ಣ ಕೆಲಸವನ್ನೂ ಶಿಸ್ತು ಹಾಗೂ ಉತ್ಸಾಹದಿಂದ ಮಾಡುವಿರಿ. ಪ್ರೇಮವು ಬಹಿರಂಗವಾಗುವ ಅಂಜಿಕೆ ಇರವುದು.
ವೃಷಭ ರಾಶಿ : ಇಂದು ನಿಮ್ಮ ಅಸತ್ಯಗಳನ್ನು ಜನರು ಎಂದಿನಂತೆ ನಂಬಲಾರರು. ಇಂದು ನೀವು ಏನೂ ಕೆಲಸವಿಲ್ಲದೇ ಸಮಯವನ್ನು ವ್ಯರ್ಥಮಾಡುವಿರಿ. ಸಂಗಾತಿಯಿಂದ ನಿಮ್ಮ ಯೋಚನೆಗೆ ಪುಷ್ಟಿ ಸಿಗುವುದು. ಅನವಶ್ಯಕ ಆಲೋಚನೆಗಳಿಂದ ಮನಸ್ಸು ಕ್ಷೋಭೆಗೊಳ್ಳುವುದು. ಆರೋಗ್ಯದ ವೃದ್ಧಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಯಾರೊಂದಿಗೂ ಸ್ಪರ್ಧಿಸುವ ಅವಶ್ಯಕತೆ ಇಲ್ಲ. ನಿಮ್ಮ ಜವಾಬ್ದಾರಿಯ ಕಾರ್ಯಗಳು ಮುನ್ನೆಲೆಗೆ ಬರಬಹುದು. ಅಪರೂಪದ ದ್ರವ್ಯಗಳ ಸಂಗ್ರಹವನ್ನು ಮಾಡುವಿರಿ. ಗಣ್ಯರ ವ್ಯಕ್ತಿತ್ವವು ನಿಮ್ಮ ಮೇಲೆ ಪ್ರಭಾವವನ್ನು ಬೀರಬಹುದು. ಸುಮ್ಮನೇ ಆಡಿದ ಮಾತುಗಳೂ ನಿಮಗೆ ಕಷ್ಟವಾದೀತು. ನಿಮ್ಮ ವಿರುದ್ಧ ನಡೆಯುವ ತಂತ್ರವನ್ನು ನೀವು ಅರಿತುಕೊಳ್ಳುವಿರಿ. ನಿಮ್ಮ ಸಿದ್ಧಾಂತದ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳಬಹುದು.
ಮಿಥುನ ರಾಶಿ : ಇಂದು ಸ್ಪರ್ಧಾತ್ಮಕವಾಗಿ ನೀವು ಗೆಲ್ಲಲೇಬೇಕು. ಇಂದು ನಿಮಗೆ ಇಷ್ಟವಾಗದವರ ಜೊತೆ ಮಾತನಾಡುವ ಸಂದರ್ಭವು ಅನಿರೀಕ್ಷಿತವಾಗಿ ಬರುವುದು. ನಿಮ್ಮ ಕುಶಲ ಕಾರ್ಯದಿಂದ ಪ್ರಸಿದ್ಧಿ ದೊರೆಯುವುದು. ಉದ್ಯೋಗದಲ್ಲಿ ಹಳೆಯ ಸಮಸ್ಯೆಯು ಪುನಃ ಬಾರದಂತೆ ನೋಡಿಕೊಳ್ಳಿ. ವಾದವನ್ನು ಮಾಡುವ ಮುಂದಿರುವ ಜನರನ್ನು ನೋಡಿಕೊಳ್ಳಿ. ನಾಲಿಗೆಯನ್ನು ಹೇಗಾದರೂ ಹರಿ ಬಿಡುವುದು ಬೇಡ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು. ಸರ್ಕಾರಿ ಉದ್ಯೋಗದಲ್ಲಿ ಇದ್ದವರಿಗೆ ಕಾರ್ಯದಲ್ಲಿ ಒತ್ತಡವು ಮೇಲಧಿಕಾರಿಗಳಿಂದ ಬರುವುದು. ದೂರ ಪ್ರಯಾಣವನ್ನು ಮಾಡಲು ಬೇಕಾದ ತಯಾರಿ ಇರಲಿ. ಆಗಬೇಕಾದ ವಿವಾಹವನ್ನು ತಪ್ಪಿಸುವ ಸಾಧ್ಯತೆ ಇದೆ. ಬೇಕಾದ ವಸ್ತುವನ್ನೇ ನೀವು ಯಾರಿಗಾದರೂ ಕೊಟ್ಟು ಕಳೆದುಕೊಳ್ಳುವಿರಿ.
ಕರ್ಕಾಟಕ ರಾಶಿ : ಇಂದಿನ ದಿನ ಯಾರಿಂದಲೂ ನಿಮಗೆ ಸುಲಭವಾಗಿ ಮೆಚ್ಚುಗೆ ಸಿಗದು. ನೀವು ಇಂದು ದೂರದ ಪ್ರಯಾಣವನ್ನು ಮಾಡಲು ಸಾಧ್ಯವಾಗದು. ಬಲವೃದ್ಧಿಗೆ ಬೇಕಾದ ತಯಾರಿಯನ್ನು ಮಾಡಿಕೋಳ್ಳುವುದು ಉತ್ತಮ. ಮಹಿಳೆಯರು ಆದಾಯದಲ್ಲಿ ಮುನ್ನಡೆ ಸಾಧಿಸುವರು ಇಂದು. ಕಾರ್ಯದಲ್ಲಿ ಆಗುವ ವ್ಯತ್ಯಸದಿಂದ ಕೋಪಗೊಳ್ಳುವುದು ಬೇಡ. ಒಂದು ನಾಣ್ಯಕ್ಕೆ ಎರಡು ಮುಖಗಳು. ಎರಡೂ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳುವುದಿಲ್ಲ. ಆದರೇ ಇಬ್ಬರಲ್ಲಿ ಯಾರೊಬ್ಬ್ು ಇಲ್ಲದಿದ್ದರೂ ಇಬ್ಬರೂ ಇರುವುದಿಲ್ಲ. ವಿದ್ಯಾರ್ಥಿಗಳ ಓದುವ ಮನಸ್ಸು ಬಹಳ ಚಂಚಲವಾಗಿ ಇರಲಿದೆ. ಸರಿಯಾದ ತಿಳಿವಳಿಕೆ ಅಗತ್ಯ. ಅತ್ಯಂತ ಬೆಲೆ ಬಾಳುವ ಮರಗಳೂ ಎಂದಿಗೂ ಅಲ್ಪಕಾಲದಲ್ಲಿ ಬೆಳೆಯುವುದಿಲ್ಲ. ಸಂಗಾತಿಗಳು ಒಂದೆಡೆ ಕುಳಿತು ನಿಮ್ಮ ಭಾವನೆಗಳನ್ನು ಪರಸ್ಪರ ಹಂಚಿಕೊಳ್ಳಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ನಿಮಗೇ ಗೊತ್ತಾಗದಂತೆ ಇಂದು ಹಣವು ಖರ್ಚಾಗವುದು.
ಸಿಂಹ ರಾಶಿ : ಇಂದು ನಿಮಗೆ ಸಕಾಲಕ್ಕೆ ಸಿಗುವ ಸಹಾಯದಿಂದ ಸಂತೋಷವಾಗವುದು. ಇನ್ನೊಬ್ಬರ ನೋವಿಗೆ ಸ್ಪಂದನೆ ಸರಿಯಾಗಿ ಇರಲಿ. ಅಪ್ರಬುದ್ಧ ಆಲೋಚನೆಗಳು ನಿಮ್ಮಿಂದ ದೂರವಿರಲಿ. ಸಾಹಸದ ಕೆಲಸಕ್ಕೆ ನೀವು ಹೆಚ್ಚು ಉತ್ಸುಕರಾಗಿದ್ದೀರಿ. ನಿಮ್ಮ ವ್ಯಕ್ತಿತ್ವವು ಬೆಳಕಿಗೆ ಬರಲು ಇಂದು ಸಹಾಯಕವಾಗುವುದು. ಮೆಚ್ಚುಗೆಯ ಮಾತಿನಿಂದ ಸಂಕೋಚಗೊಳ್ಳುವಿರಿ. ಆರಿಸಿಕೊಂಡ ಆಯ್ಕೆಯು ನಿಮಗೆ ಇಷ್ಟವಾಗದೇ ಈಗ ಇರುವುದು. ಸಾಮಾಜಿಕ ಗೌರವದಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವಿರಿ. ಮಕ್ಕಳಿಗೆ ನಿಮ್ಮ ಪ್ರೀತಿಯ ಅವಶ್ಯಕತೆ ಇರುವುದು. ಸಂಪಾದನೆಯ ಕಡೆ ಅಧಿಕ ಗಮನ ಇರಲಿದ್ದು ಸಂಬಂಧಗಳ ಬಗ್ಗೆ ಆಲೋಚನೆಯನ್ನು ಬಿಡುವಿರಿ. ಭೂಮಿಯ ಮೇಲೆ ಹೂಡಿಕೆ ಮಾಡುವುದು ನಿಮಗೆ ಸೂಕ್ತ ಎನಿಸಬಹುದು. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಸಾಹಸ ಪ್ರವೃತ್ತಿ ಒಳ್ಳೆಯದಲ್ಲ.
ಕನ್ಯಾ ರಾಶಿ : ನಿಮ್ಮ ಹಸ್ತಕ್ಷೇಪವು ಇತರರಿಗೆ ಕಷ್ಟವಾಗದು. ನಿಮ್ಮ ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವೂ ಆಗಬಹುದು. ಆದಾಯದ ವೃದ್ದಿಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಿರಿ. ತಂದೆಯ ವಿಚಾರದಲ್ಲಿ ಅನಾದರವು ಬರಬಹುದು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ನಿಮಗೆ ಅವಸರ ಹೆಚ್ಚಾಗಿರುವುದು. ಧನದ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಇಂದು ಅಧಿಕ ಒತ್ತಡವಿಲ್ಲದೇ ಕಾರ್ಯವು ಮುಗಿಯುವುದು. ವಿದೇಶ ಪ್ರಯಾಣದಿಂದ ಖುಷಿಯು ಇರಲಿದೆ. ಸೌಂದರ್ಯಪ್ರಜ್ಞೆಯು ಇಂದು ಅಧಿಕವಾಗಿ ಅಲಂಕಾರಕ್ಕೆ ಹೆಚ್ಚಿನ ಸಮಯವನ್ನು ಕೊಡುವರು. ನಿಮ್ಮ ಭಾವನೆಗೆ ಸ್ಪಂದಿಸುವವರನ್ನು ಹುಡುಕುವಿರಿ. ಮನೆಯಲ್ಲಿ ನಡೆಯುವ ವಿವಾಹದ ಮಾತುಕತೆಗಳಿಂದ ನಿಮಗೆ ಖುಷಿಯಾಗುವುದು. ಖ್ಯಾತಿಯನ್ನು ಪಡೆಯುವ ಆಸೆಯಾಗುವುದು. ಹೋಲಿಕೆಯಿಂದ ಕೀಳರಿಮೆ ನಿಮಗೆ ಬರಬಹುದು.