ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕರ್ನಾಟಕದ ಮಲೆನಾಡು ಭಾಗಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮೈಕೊರೆವ ಚಳಿ ಶುರುವಾಗಿದೆ. ಮೋಡಕವಿದ ವಾತಾವರಣವೂ ಇರುವ ಕಾರಣ ಒಂದೆರಡು ದಿನ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ, ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.