ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರು ಕಡಪಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿದ ಬಳಿಕ, ಶರ್ಮಿಳಾರನ್ನ ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ರಾಜಮಂಡ್ರಿಯಿಂದ ಗಿಡುಗು ರುದ್ರರಾಜು, ಬಪಟಾಳ ಮೀಸಲು ಕ್ಷೇತ್ರದಿಂದ ಜೆ.ಡಿ. ಸೀಲಂ, ಕರ್ನೂಲ್ ನಿಂದ ರಾಂಪುಲಯ್ಯ ಯಾದವ್ ಅವರು ಸ್ಪರ್ಧೆ ಮಾಡಲಿದ್ದಾರೆ.