ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಜೋಡಿ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಹಾಲು ಜೇನಿನಂತೆ ಸಮ್ಮಿಳಿತವಾಗಿ ಕೆಲಸ ಮಾಡುತ್ತಿವೆ ಎಂದು ಮೈತ್ರಿಕೂಟದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಹಿಳಾ ಮೀಸಲು ಮಸೂದೆಯನ್ನು ಅಂದು ಪ್ರಧಾನಿ ಆಗಿದ್ದ ದೇವೇಗೌಡರು ಸಂಸತ್ತಿನಲ್ಲಿ ಮಂಡಿಸಿದರು. ಇಂದಿನ ಪ್ರಧಾನಿಗಳಾದ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂಥ ಜೋಡಿ ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದು. ಇವರಿಬ್ಬರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು. ಎನ್ ಡಿ ಎ ಮೈತ್ರಿಕೂಟ ದೇಶಾದಲ್ಲಿ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ. ಆ 400 ಸಂಸದರಲ್ಲಿ ನಾನು ಇರುತ್ತೇನೆ ಎಂದರು.