ಹಾಸನದಲ್ಲಿ ನಡೆಯುತ್ತಿರುವ ಕಾಮಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಕೆ.ಹೆಚ್ ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾಗಿದೆ. ಹೆಚ್ಚಿನ ಅನಾಹುತ ಆಗಿಲ್ಲ ಎಂಬುದು ಸದ್ಯಕ್ಕೆ ತಿಳಿದು ಬಂದಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರು ಸಚಿವ ಮುನಿಯಪ್ಪರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಯಾರಿಗೂ ಯಾವುದೇ ಪ್ರಾಣ ಹಾನಿ, ಅಪಾಯ ಆಗಿಲ್ಲ ಎಂದು ತಿಳಿದುಬಂದಿದೆ.
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ನಡೆದಿದೆ. ಮುನಿಯಪ್ಪ ಅವರಿದ್ದ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದು, ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ.