ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ರೈತರು ದಂಗೆ ಎದ್ದಿದ್ದಾರೆ. ದೆಹಲಿ-ಹರಿಯಾಣ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಂಭು ಗಡಿಯಿಂದ ದೆಹಲಿಗೆ ನುಗ್ಗಲು ಅನ್ನದಾತರು ಪ್ರಯತ್ನ ಮಾಡುತ್ತಿದ್ದಾರೆ. ಏಕಕಾಲದಲ್ಲಿ ಸಾವಿರಾರು ರೈತರಿಂದ ದೆಹಲಿಗೆ ನುಗ್ಗಲು ಯತ್ನಿಸುತ್ತಿದ್ದಾರೆ.
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರೊಟೆಸ್ಟ್ ಮಾಡುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ದೆಹಲಿಯತ್ತ ಹೋಗಲು ಯತ್ನಿಸುತ್ತಿದ್ದಾರೆ. ಬ್ಯಾರಿಕೇಡ್ ಹಾಕಿ ರೈತರನ್ನ ದೆಹಲಿ ಪೊಲೀಸರು ತಡೆದಿದ್ದಾರೆ. ಸಂಸತ್ ಭವನಕ್ಕೆ ಪಾದಯಾತ್ರೆ ಮಾಡಲು ರೈತರು ಮುಂದಾಗಿದ್ದರು.
ರೈತರು ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಎಂಎಸ್ ಪಿಗೆ ಕಾನೂನು ಬದ್ಧ ಖಾತರಿಗೆ ಆಗ್ರಹ ಮಾಡಿ, ಸಾಲ ಮನ್ನಾಕ್ಕೆ ಮನವಿ ಮಾಡಿದ್ದಾರೆ. ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಒತ್ತಡ ಹೇರಿದ್ದಾರೆ. ವಿದ್ಯುತ್ ದರವನ್ನು ಹೆಚ್ಚಿಸದಂತೆಯೂ ರೈತರು ಒತ್ತಾಯಿಸಿದ್ದಾರೆ.
2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. 2013 ರ ಭೂ ಸ್ವಾಧೀನ ಕಾಯಿದೆಯನ್ನು ಮರುಸ್ಥಾಪಿಸಲು ಆಗ್ರಹ ಮಾಡಿದ್ದಾರೆ. 2020-21ರಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಕೋರಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.