ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ತಮ್ಮ ಮನೆಯಲ್ಲಿ ಐಗಳಿ ಪೊಲೀಸ್ ಠಾಣೆ ಎಎಸ್ಐ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಂಭು ಮೆತ್ರಿ (50) ನೇಣಿಗೆ ಶರಣಾದ ಎಎಸ್ಐ. ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಹಲವಾರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.