ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಬಿರುಕು ಮೂಡಿ, ಅದು ಅತಿ ದೊಡ್ಡ ಗೊಂಲಕ್ಕೆ ಕಾರಣವಾಗಿದೆ. ಬಿಜೆಪಿ, ಜೆಡಿಎಸ್ ನಾಯಕರ ರಾಜಕೀಯ ದಾಳಕ್ಕೆ ಕಾಂಗ್ರೆಸ್ ನಾಯಕರು ಉಪಚುನಾವಣೆಯ ಗೆಲುವಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ರಾಜಕೀಯ ಆಟದಲ್ಲಿ ವಿರೋಧ ಪಕ್ಷಗಳನ್ನು ಎದುರಿಸಿರುವ ರಾಜ್ಯ ಸರ್ಕಾರಕ್ಕೆ ಸ್ವಪಕ್ಷದ ನಾಯಕರ ಮಾತುಗಳೇ ಚುಚ್ಚುವಂತಿದೆ. ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದ ಆಗಿದೆ ಅನ್ನೋ ಸತ್ಯವನ್ನು ಬಿಚ್ಚಿಟ್ಟಿದ್ದರು, ಆದರೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಂದದ ಮಾತಗಳನ್ನ ತಳ್ಳಿ ಹಾಕಿದ್ದರು. ಡಿಸಿಎಂ ಕೊಟ್ಟ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರೋದಂತೂ ನಿಜ.
ಸಿಎಂ, ಡಿಸಿಎಂ ಮಾತುಗಳ ಯೋಚನೆಗಳ ಮಧ್ಯೆ ಇಂದು ಕಾಂಗ್ರೆಸ್ ಹಿರಿಯ ನಾಯಕ, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕೋಲಾರದಲ್ಲಿ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದ ಆಗಿದೆ. ಡಿ.ಕೆ ಶಿವಕುಮಾರ್ ಅವರು ಹೇಳಿದ್ದು ಸರಿಯಾಗಿಯೇ ಇದೆ. ನನ್ನನ್ನು ಬೇರೇನು ಕೇಳಬೇಡಿ ಎಂದು ಹೇಳಿದ್ದಾರೆ. ಬಿಜೆಪಿ ಹೆಚ್ಚು ಹೋರಾಟ ಮಾಡಿದಾಗಲೆಲ್ಲಾ ಅದು ಕಾಂಗ್ರೆಸ್ಗೆ ಹೆಚ್ಚು ಅನುಕೂಲ ತಂದಿದೆ. ಆದರೆ ಬಿಜೆಪಿಯವರು ಅಧಿಕಾರಕ್ಕೆ ಬರುವುದರ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಅದನ್ನು ನಾವು ಸಹಿಸುವುದಿಲ್ಲ . ರಾಜ್ಯದಲ್ಲಿ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಮುನಿಯಪ್ಪ ಹೇಳಿದ್ದಾರೆ. ಅಧಿಕಾರ ಹಂಚಿಕೆ ಒಪ್ಪಂದ ಆಗಿರೋದು ನಿಜ ಅನ್ನುವ ಮೂಲಕ ಸಚಿವ ಮುನಿಯಪ್ಪನವರು ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಮುನ್ಸೂಚನೆ ಕೊಟ್ಟರಾ ಅನ್ನೋ ಅನುಮಾನ ಮೂಡಿದೆ.ವ