ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಾಳಯ ಭರ್ಜರಿ ತಯಾರಿ ನಡೆಸುತ್ತಿದೆ. KPCC ಕಚೇರಿಯಲ್ಲಿ, ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಮುಖಂಡರುಗಳು ಮತ್ತು ಪ್ರಭಾವಿಗಳ ಸಭೆಯಲ್ಲಿ ಭಾಗವಹಿಸಿ ಚುನಾವಣೆಯ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಶಿವಕುಮಾರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಿದರು.