ಭಾರತೀಯ ರಿಸರ್ವ್ ಬ್ಯಾಂಕ್ ಆರ್ಬಿಐ ನ ನೂತನ ಗವರ್ನರ್ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಗರ್ವನರ್ ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಳ್ಳಲಿದೆ. ಡಿಸೆಂಬರ್ 11ರಂದು ರಿಸರ್ವ್ ಬ್ಯಾಂಕ್ನ ಮುಂದಿನ ಗವರ್ನರ್ ಆಗಿ ಮಲ್ಹೋತ್ರಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಅವರು ಆರ್ಬಿಐ ಬ್ಯಾಂಕ್ ಅನ್ನು ಮುನ್ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
![](https://images.moneycontrol.com/static-mcnews/2024/12/20241209060841_Shaktikanta-Das-pic-new.jpg?impolicy=website&width=770&height=431)
2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ತೆರುವಿನ ನಂತರ, ಆರ್ಬಿಐ ನ 25ನೇ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕಗೊಂಡಿದ್ದರು. ಮೂರು ವರ್ಷಗಳ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಶಕ್ತಿಕಾಂತ್ ದಾಸ್ ಅವರನ್ನ ಮುಂದುವರಿಸಲಾಗಿತ್ತು.
![](https://www.hindustantimes.com/ht-img/img/2024/12/09/550x309/Fi3rHYpaYAA-4Tu_1733748168730_1733748187528.jpg)
ಸಂಜಯ್ ಮಲ್ಹೋತ್ರಾ ಅವರು 1990ರ ಬ್ಯಾಚ್ನ ರಾಜಸ್ಥಾನ ಕೇಡರ್ನ ಐಎಎಸ್ ಅಧಿಕಾರಿ. ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಕಾಣುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಬಜೆಟ್ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಪರಿಶೀಲನೆ ನಡೆಸುತ್ತಿದ್ದರು.