ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆಸಿ, ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ನಾಳೆ ರಾಜ್ಯದ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.. ಎಸ್.ಎಂ.ಕೃಷ್ಣ ನಿಧನ ಹಿನ್ನೆಲೆ ನಾಳೆ ಅಂದರೆ 11/12/2024 ಬುಧವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದಿಂದ 3 ದಿನ ಶೋಕಾಚರಣೆಗೆ ನಿರ್ಧಾರ ಮಾಡಲಾಗಿದೆ.