ಬೆಳಗಾವಿಯಲ್ಲಿ 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗುರುವಾರ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಂದ ಮಾಹಿತಿ ಪಡೆದರು. ಲಾಠಿ ಚಾರ್ಜ್ ಕುರಿತು ಸಂಪೂರ್ಣ ಮಾಹಿತಿಯನ್ನ ಸಿಎಂ ಸಿದ್ದರಾಮಯ್ಯ ಪಡೆದುಕೊಂಡಿದ್ದು, ನೀವು ಮಾಡಿದ್ದು ಸರಿ ಇದೆ ಎಂದು ಹೇಳಿದ್ದಾರೆ.
ಲಾಠಿಚಾರ್ಜ್ ಮತ್ತು ಪ್ರತಿಭಟನೆ ಕುರಿತು ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಗಲಾಟೆಯ ಸಂಪೂರ್ಣ ವಿಡಿಯೋ ನೋಡಿದರು. ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಪ್ರತಿಭಟನೆ ವೇಳೆ ಉಲ್ಲಂಘನೆ ಮಾಡಿದ್ದಾರೆ ಎಂದು ಆದೇಶ ಪ್ರತಿ ಸಮೇತ ಸಿದ್ದರಾಮಯ್ಯಗೆ ವಿವರಣೆ ನೀಡಿದ್ದಾರೆ ಡಿಸಿ ಮೊಹಮ್ಮದ್ ರೋಷನ್.
ಪಂಚಮಸಾಲಿ ಹೋರಾಟಕ್ಕೆ ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ ಶಾಂತಿಯುತ ಪ್ರತಿಭಟನೆ ಮಾಡುವಂತೆ ಆದೇಶ ಇತ್ತು. ಹೈಕೋರ್ಟ್ ಆದೇಶ ಪಾಲನೆಗೆ ಹಾಗೂ ಕಾನೂನು ಸಂರಕ್ಷಣೆಗೆ ಲಾಠಿ ಚಾರ್ಜ್ ಮಾಡಿದ್ದೇವೆ ಎಂದು ಸಿಎಂ ಮುಂದೆ ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನ್ಯಾಯಾಲಯದ ಆದೇಶ ಪಾಲನೆ ಮಾಡಿದ್ದು ಒಳ್ಳೆಯದು ಎಂದು ಅಧಿಕಾರಿಗಳು ನೀಡಿದ ವಿಡಿಯೋ ಹಾಗೂ ಹೈಕೋರ್ಟ್ ಆದೇಶದ ಪ್ರತಿಯನ್ನ ತೆಗೆದುಕೊಂಡು ಹೋಗಿದ್ದಾರೆ.