ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಘಟನೆಯಿಂದ ಕೇಸರಿ ಪಡೆ ರೊಚ್ಚಿಗೆದ್ದಿದೆ. ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿ ಸುವರ್ಣಸೌಧದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಿಂಗಾಯುತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಪೊಲೀಸರ ವರ್ತನೆಯಿಂದ ಹೋರಾಟಗಾರರು ಮನಮೊಂದಿದ್ದಾರೆ. ಕೂಡಲೇ ಪೊಲೀಸರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅಧಿಕಾರಿಯನ್ನ ಸಸ್ಪೆಂಡ್ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಭಾಗಿಯಾಗಿದ್ದರು.