ಹುಬ್ಬಳ್ಳಿ: ಪಂಚಮಸಾಲಿ ಸಮುದಾಯದವರಿಗೆ 2A ಮೀಸಲಾತಿ ನೀಡುವ ವಿಚಾರಕ್ಕೆ, ಸುವರ್ಣಸೌಧದ ಬಳಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ವಿರೋಧಿಸಿ ರಾಜ್ಯಾದ್ಯಂತ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹುಬ್ಬಳ್ಳಿ ಹಾಗೂ ಗದಗದಲ್ಲೂ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಸಮುದಾಯ ಹೋರಾಟಗಾರರು ಉಣಕಲ್ ಕೆರೆಯ ಬಳಿ ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ, ಆಕ್ರೋಶ ಹೊರಹಾಕಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲಾಯಿತು. ಇನ್ನು ಗದಗದಲ್ಲಿ ಕೂಡ ಜಿಲ್ಲಾಧಿಕಾರಿ ಕಚೇರಿಯ ಸಮೀಪ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.