ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ (ಕೆಟಿಟಿಎ) ವತಿಯಿಂದ ಆಯೋಜಿಸಿದ್ದ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ ಗೆ ಇಂದು ಶಾಸಕರಾದ ರಿಜ್ವಾನ್ ಅರ್ಷದ್ ಅವರು ಹಾಗು ಕೆಟಿಟಿಎ ಅಧ್ಯಕ್ಷರಾದ ರಕ್ಷಾ ರಾಮಯ್ಯ ಅವರು ಟೇಬಲ್ ಟೆನಿಸ್ ಆಟ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ 29 ರಾಜ್ಯಗಳು ಹಾಗೂ ದೇಶದಾದ್ಯಂತ 1693 ಕ್ಕೂ ಅಧಿಕ ಸಂಖ್ಯೆಯ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ವಿಶೇಷವಾಗಿದೆ.
ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಮಾತನಾಡಿ ಕ್ರೀಡೆ ಯುವ ಸಮೂಹದ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದ್ದು, ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಪೂರಕವಾಗಿದೆ. ಟೇಬಲ್ ಟೆನ್ನಿಸ್ ಅತ್ಯಂತ ಪ್ರಮುಖ ಕ್ರೀಡೆಯಾಗಿದ್ದು, ಇದರಿಂದ ದೇಹದ ಎಲ್ಲಾ ಅಂಗಾಂಗಳಿಗೂ ವ್ಯಾಯಾಮ ದೊರೆಯುತ್ತದೆ. ಏಕಾಗ್ರತೆಯ ಪ್ರತೀಕವಾಗಿರುವ ಟೇಬಲ್ ಟೆನ್ನಿಸ್ ಕ್ರೀಡೆಯನ್ನು ರಾಜ್ಯದಲ್ಲಿ ಮತ್ತಷ್ಟು ಪ್ರಗತಿ ಪಥದತ್ತ ಸಾಗಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ಅವರು, ಮಂಜುನಾಥ್ ಕಾರ್ಯದರ್ಶಿ ಹಾಗು ಗಣ್ಯರು, ಕ್ರೀಡಾಸಕ್ತರು ಉಪಸ್ಥಿತರಿದ್ದರು.