ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ಗೆ ಕೊಲೆ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆಯ ವಿಡಿಯೋ ವೈರಲ್ ಆಗಿತ್ತು. ಇದಾದ ನಂತರ, ಸೆಕ್ಟರ್ 39 ನೋಯ್ಡಾ ಪೊಲೀಸರು ತನಿಖೆ ಮಾಡಿ, ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆತನ ಬಳಿ ಇದ್ದ ವೆಪನ್ಸ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯುಪಿ ಸಿಎಂ ಯೋಗಿ ಆದಿತ್ಯನಾಥ್ಅವರನ್ನ ಕೊಲೆ ಮಾಡುವ ಬಗ್ಗೆ ಮಾತನಾಡುತ್ತಿರುವುದು ಹಾಗು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿರುವುದು ಕಂಡುಬಂದಿದೆ.
ಬಾಂಗ್ಲಾದೇಶ ಮೂಲದವನಾದ ಶೇಖ್ ಅತಾಲ್ ನನ್ನು ದೆಹಲಿಯ ಶಾಹೀನ್ ಬಾಗ್ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 40 ವರ್ಷದ ಆರೋಪಿ ಶೇಖ್ ಅತಾಲ್ ಅವರ ಬಳಿ ಪಿಸ್ತೂಲ್, ಕಾರ್ಟ್ರಿಡ್ಜ್ಗಳು, ಆಕ್ಷೇಪಾರ್ಹ ದಾಖಲೆಗಳು ಮತ್ತು ಮೊಬೈಲ್ ಫೋನ್ ಸಿಕ್ಕಿದೆ. ಇದನ್ನು ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಹಂಚಿಕೊಂಡಿದ್ದ ವಿಡಿಯೋದಲ್ಲಿ ತೋರಿಸಿದ್ದ.