ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನಿಗೆ ಚಾಕು ಇರಿದ ಘಟನೆ ಕುಣಿಗಲ್ ತಾಲೂಕಿನ ನಡೇಮಾವಿನಪುರದಲ್ಲಿ ನಡೆದಿದೆ. ರಾಜಕೀಯ ವೈಷಮ್ಯ ಹಿನ್ನೆಲೆ ಹಲ್ಲೆ ಮಾಡಿರುವುದಾಗಿ ಯೂತ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿರುವ ಕೀರ್ತಿ ಎಂಬುವವರು ದೂರು ನೀಡಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಬಿಜೆಪಿಯ ಕಾರ್ಯಕರ್ತರಾದ ಚಂದ್ರು, ಜಗದೀಶ್, ಸುನೀಲ್, ರಾಜಕೀಯ ವೈಷಮ್ಯ ಹಿನ್ನೆಲೆ ಹಲ್ಲೆ ಮಾಡಿ, ಬಳಿಕ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಕೀರ್ತಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆರೋಪಿಗಳ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.