ಮೇಷ ರಾಶಿ: ಕೈಗೆತ್ತಿಕೊಂಡ ಕಾರ್ಯಗಳು ವಿಳಂಬವಾದರೂ ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಅಗತ್ಯಕ್ಕೆ ನಿಕಟ ಸ್ನೇಹಿತರ ಸಹಾಯವನ್ನು ಪಡೆಯುತ್ತೀರಿ. ಕುಟುಂಬ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ಪರಿಹರಿಸುತ್ತೀರಿ. ಕೌಟುಂಬಿಕ ವಾತಾವರಣ ಸಂತೋಷದಿಂದ ಕೂಡಿರುತ್ತದೆ.
ವೃಷಭ ರಾಶಿ: ಇಷ್ಟದ ವಸ್ತುವಿನ ಪ್ರಾಪ್ತಿಯ ಸಂತೋಷವಿದ್ದರೂ ಖರ್ಚಿನ ನೋವು ನಿಮ್ಮನ್ನು ಕಾಡಬಹುದು. ಮಾತಿಗೆ ಮಾತು ಬೆಳೆಯಬಹುದು. ಅದನ್ನು ನಿಭಾಯಿಸುವ ಕಲೆ ಗೊತ್ತಿರಲಿ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಅಂದುಕೊಂಡಿದ್ದಕ್ಕಿಂತ ಖರ್ಚು ಅಧಿಕವಾಗಿದ್ದು ಗಳಿಕೆಯ ಬಗ್ಗೆ ಆಲೋಚಿಸುವಿರಿ.
ಮಿಥುನ ರಾಶಿ: ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳನ್ನು ಸ್ವೀಕರಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳಲಿವೆ. ಹೊಸ ಸಾಲದ ಪ್ರಯತ್ನಗಳು ಅನುಕೂಲಕರವಾಗಿವೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ.ಕುಟುಂಬದೊಂದಿಗೆ ಮನರಂಜನಾ ಮತ್ತು ಆರೋಗ್ಯ ಸಂಬಂಧಿತ ಚಟುವಟಿಕೆಗಳಲ್ಲಿ ಸಮಯ ಕಳೆಯಲಾಗುತ್ತದೆ.
ಕರ್ಕಾಟಕ ರಾಶಿ: ನ್ಯಾಯಸಮ್ಮತ ಮಾರ್ಗದಲ್ಲಿ ನೀವು ಇರುವುದು ಸೂಕ್ತ. ಹಿರಿಯರ ಜೊತೆ ಔಚಿತ್ಯ ರೀತಿಯಿಂದ ವ್ಯವಸ್ಥೆ ವ್ಯವಹರಿಸಿ. ಸ್ತ್ರೀಯರಿಂದ ಅಪಮಾನವಾಗುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಆಶ್ಚರ್ಯ ಉಂಟಾಗಬಹುದು. ಸಂಗಾತಿಯ ಜೊತೆ ಆರಾಮಾಗಿ ಮಾತನಾಡುವಿರಿ. ಕೆಲವೊಮ್ಮೆ ಮನೆಯ ಸದಸ್ಯರು ಅತಿಯಾದ ಹಸ್ತಕ್ಷೇಪದಿಂದ ತೊಂದರೆಗೊಳಗಾಗಬಹುದು.
ಸಿಂಹ ರಾಶಿ: ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕೈಗೆತ್ತಿಕೊಂಡ ವ್ಯವಹಾರಗಳು ಮಧ್ಯದಲ್ಲಿ ನಿಲ್ಲುತ್ತವೆ, ವ್ಯವಹಾರದಲ್ಲಿ ಹೆಚ್ಚು ಚರ್ಚೆಗಳು ನಡೆಯುವುದಿಲ್ಲ. ಸ್ನೇಹಿತರೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ, ವೃತ್ತಿಪರ ಕೆಲಸಗಳು ಸಾಮಾನ್ಯವಾಗಿ ಸಾಗುತ್ತವೆ.ಸಂಬಂಧವನ್ನು ಮಧುರವಾಗಿಡುವಲ್ಲಿ ನಿಮ್ಮ ವಿಶೇಷ ಕೊಡುಗೆ ಇರುತ್ತದೆ.
ಕನ್ಯಾ ರಾಶಿ: ಇಂದು ಯಾರನ್ನೂ ನಂಬುವ ಸ್ಥಿತಿಯಲ್ಲಿ ನೀವು ಇರಲಾರಿರಿ. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ. ಅವಿಶ್ರಾಂತ ಕಾರ್ಯದಿಂದ ಮನಸ್ಸಿಗೆ ತೊಂದರೆ ಸಾಧ್ಯ. ಅಪರಿಚಿತ ಕರೆಗಳು ನಿಮಗೆ ಹಿಂಸೆಯನ್ನು ಕೊಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಪೂರ್ಣ ಸಮಾಧಾನ ಇರದು.
ತುಲಾ ರಾಶಿ: ನಿಮ್ಮ ಜೀವನಶೈಲಿಯನ್ನು ಹೆಚ್ಚು ಸುಧಾರಿತವಾಗಿಡಲು ಪ್ರಯತ್ನಿಸಿ. ನಿಮ್ಮ ಕೆಲಸಕ್ಕೆ ಹೊಸ ನೋಟವನ್ನು ನೀಡಲು ಸೃಜನಶೀಲ ಚಟುವಟಿಕೆಗಳಲ್ಲಿ ಆಸಕ್ತಿ ಇರುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಯಶಸ್ಸನ್ನು ಪಡೆಯಬಹುದು. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ಶತ್ರುಗಳಿಂದ ನಿಮಗೆ ಆಗಬೇಕಾದ ಕಾರ್ಯವಾಗಬಹುದು.
ವೃಶ್ಚಿಕ ರಾಶಿ: ಇಂದು ನೀವು ದಿನದ ಆರಂಭದಲ್ಲಿ ಹೆಚ್ಚು ಕೆಲಸದಲ್ಲಿ ನಿರತರಾಗಿರುತ್ತೀರಿ. ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಆಹ್ವಾನ ಬರುತ್ತದೆ. ಸಾರ್ವಜನಿಕ ವ್ಯವಹಾರ, ಗ್ಲಾಮರ್ ಇತ್ಯಾದಿಗಳಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಯಶಸ್ಸು ಇರುತ್ತದೆ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ಜಾಡ್ಯದಿಂದ ಇಂದು ಕಛೇರಿಗೆ ವಿಳಂಬವಾಗಿ ಹೋಗುವಿರಿ.
ಧನು ರಾಶಿ: ಖರ್ಚನ್ನು ನಿಭಾಯಿಸುವ ಕೌಶಲವನ್ನು ಅನುಭವಿಗಳಿಂದ ಪಡೆಯಬೇಕು. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಗೊಂದಲ ಬರಬಹುದು. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು. ತಪ್ಪು ಚಟುವಟಿಕೆಗಳಿಗೆ ಹೆಚ್ಚು ಖರ್ಚು ಮಾಡುವುದರಿಂದ ಮನಸ್ಸಿನಲ್ಲಿ ಸ್ವಲ್ಪ ತೊಂದರೆ ಉಂಟಾಗಬಹುದು.
ಮಕರ ರಾಶಿ: ಪ್ರಮುಖ ವಿಷಯಗಳಲ್ಲಿ ಸ್ವಲ್ಪ ವಿಳಂಬವಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸಂಬಂಧಿಕರಿಂದ ಬಂದ ಸುದ್ದಿ ನಿರಾಶಾದಾಯಕವಾಗಿರುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ವ್ಯಾಪಾರ ಉದ್ಯೋಗಗಳಲ್ಲಿ ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ಅಪರಿಚಿತರ ಜೊತೆ ವಿವಾದಕ್ಕೆ ಎಡೆಮಾಡಿಕೊಡುವಿರಿ.
ಕುಂಭ ರಾಶಿ: ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ನಿಸ್ವಾರ್ಥ ಕೊಡುಗೆ ಇಂದು ಇರುತ್ತದೆ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಮತ್ತು ಗೌರವವೂ ಹೆಚ್ಚಾಗುತ್ತದೆ. ಬಾಕಿ ಕಾರ್ಯಗಳನ್ನು ಪೂರ್ಣಗೊಳಿಸಬಹುದು, ಅವುಗಳ ಮೇಲೆ ಗಮನ ಕೇಂದ್ರೀಕರಿಸಿ. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ಆಸ್ತಿಯನ್ನು ಪಡೆಯುವ ಬಗ್ಗೆ ಉತ್ಸಾಹವಿರಲಿದೆ.
ಮೀನ ರಾಶಿ: ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಸಾಲಕ್ಕೆ ಸಂಬಂಧಿಸಿದ ಸಮಸ್ಯೆಗಳು ಒತ್ತಡವನ್ನು ಉಂಟುಮಾಡುತ್ತವೆ. ನಿಮಗೆ ಸಿಗುವ ಕೆಲವು ಜವಾಬ್ದಾರಿಗಳಲ್ಲಿ ಹಿನ್ನಡೆಯಾಗಲಿದೆ. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ವ್ಯಾಪಾರದಲ್ಲಿ ಶತ್ರುಗಳು ಕಾಣಿಸಿಕೊಳ್ಳುವರು. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ.