ಕನ್ನಡ ಚಿತ್ರರಂಗದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿಯನ್ನು ತೆರವು ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಅಪ್ಪು ಪುತ್ಥಳಿ ಪ್ರತಿಷ್ಠಾಪನೆ, ತೆರವು ವಿಚಾರವಾಗಿ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೊನ್ನವಳ್ಳಿಯಲ್ಲಿ ಪುನೀತ್ ರಾಜ್ ಕುಮಾರ್ ಪುತ್ತಳಿ ತೆರವು ನಡೆದಿದೆ.
ಹೊನ್ನವಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೊನ್ನವಳ್ಳಿಯಲ್ಲಿ ಗುರುವಾರ ರಾತ್ರಿ ನಟ ದಿವಂಗತ ಪುನೀತ್ ರಾಜ್ಕುಮಾರ್ ಪುತ್ಥಳಿ ಪ್ರತಿಷ್ಠಾಪಿಸಲಾಗಿತ್ತು.
ಅನುಮತಿ ಸಿಗದೆ ಗುರುವಾರ ಮಧ್ಯರಾತ್ರಿ ಪುತ್ಥಳಿ ಅನಾವರಣಗೊಳಿಸಿದ್ದರು. ಬೆಳಗಿನ ಜಾವ ಪೂಜೆ ಮಾಡಲು ತೆರಳುವಷ್ಟರಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪುತ್ಥಳಿ ತೆರವುಗೊಳಿಸಿದ್ದರು ಎಂದು ತಿಳಿದು ಬಂದಿದೆ.
ಪೊಲೀಸರು ಅದನ್ನು ಶುಕ್ರವಾರ ಬೆಳಗಿನ ಜಾವ ತೆರವುಗೊಳಿಸಿದ್ದಾರೆ. ಪ್ರಕರಣದಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪುತ್ಥಳಿ ತೆರವು ಮಾಡಿದ್ದನ್ನು ಖಂಡಿಸಿ ಇದರಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದು ಅಪ್ಪು ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿದೆ.
ಇಲ್ಲಿನ ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆ ಸಂಘಟನೆಯವರು ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಪ್ರತಿಷ್ಠಾಪಿಸಲು ಮುಂದಾಗಿದ್ದರು. ಇದಕ್ಕಾಗಿ ಗ್ರಾಮ ಪಂಚಾಯಿತಿಯವರಿಗೆ ಮನವಿ ಕೂಡ ಮಾಡಿದ್ದರು. ಆದರೆ, ಪಂಚಾಯಿತಿಯವರು ಅನುಮತಿ ನೀಡಿರಲಿಲ್ಲ. ಬಳಿಕ ಸಂಘಟನೆಯವರು ಗುರುವಾರ ರಾತ್ರಿಯೇ ಇಲ್ಲಿ ಅದ್ಧೂರಿಯಾಗಿ ಪುತ್ಥಳಿ ಪ್ರತಿಷ್ಠಾಪಿಸಿದ್ದರು ಎಂದು ತಿಳಿದುಬಂದಿದೆ.
ತೆರವು ಮಾಡಿದ ಪುತ್ಥಳಿಯನ್ನು ಪೊಲೀಸರು ನಂತರ ಹೊನ್ನವಳ್ಳಿ ಗ್ರಾಮ ಪಂಚಾಯತ್ಗೆ ಹಸ್ತಾಂತರ ಮಾಡಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.