ಕುವೈತ್ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಇಂದು ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್ನ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ನೀಡಿ ಗೌರವಿಸಿದ್ದಾರೆ. ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಈ ಪ್ರಶಸ್ತಿಯನ್ನ ಸಾಮಾನ್ಯವಾಗಿ ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಗುರುತಿಗೆ ನೀಡಲಾಗುತ್ತದೆ.
ಇಲ್ಲಿಯವರೆಗೆ ಸುಮಾರು 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನ ಪಡೆದಿರುವ ಪ್ರಧಾನಿ ಮೋದಿ, ಯುಎಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಯುಕೆ ರಾಜ ರಾಜ ಚಾರ್ಲ್ಸ್ III ಅವರಂತಹವರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಇವರೆಲ್ಲರೂ ಈ ಹಿಂದೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಪ್ರಶಸ್ತಿಯನ್ನು ಪಡೆದಿದ್ದಾರೆ.
ಪ್ರಶಸ್ತಿ ಸ್ವೀಕಾರಕ್ಕೂ ಮೊದಲು ಕುವೈತ್ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆ ನಡೆಸಿದರು. ಕುವೈತ್ಗೆ ಪಪ್ರವೇಶಿಸಿದಾಗ ಪ್ರಧಾನಿ ಮೋದಿ ಅವರಿಗೆ ಬಯಾನ್ ಅರಮನೆಯಲ್ಲಿ ವಿದ್ಯುಕ್ತ ಸ್ವಾಗತ ಮತ್ತು ಗೌರವ ಗಾರ್ಡ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಅಮೀರ್, ಕ್ರೌನ್ ಪ್ರಿನ್ಸ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಮತ್ತು ಅವರ ಕುವೈತ್ ಕೌಂಟರ್ನೊಂದಿಗೆ ಚರ್ಚೆ ನಡೆಸಲಿದ್ದಾರೆ.