ಬೆಂಗಳೂರು : ದೇಶದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗೆ 11 ಕೋಟಿ ರೂ. ವಂಚನೆ ಮಾಡಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಕರೆ ಮಾಡಿ ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ.
ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಹಣ ವರ್ಗಾವಣೆ ಆಗಿದೆ. 6 ಕೋಟಿ ರೂ ವಂಚನೆ ಆಗಿದೆ ಎಂದು ಸಾಫ್ಟ್ವೇರ್ ಎಂಜಿನಿಯರ್ ವಿಜಯ್ ಕುಮಾರ್ಗೆ ಬೆದರಿಸಿದ್ದಾರೆ. ವಿಡಿಯೋ ಕಾಲ್ ಮಾಡಿಒದ ವಂಚಕರು ನಿಮ್ಮನ್ನು ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ 1 ತಿಂಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಅದರಂತೆ ಕೇಳಿದ ವಿಜಯ್ ಕುಮಾರ್ ಹಂತ ಹಂತವಾಗಿ ಬರೋಬ್ಬರಿ 11 ಕೋಟಿ ರೂ. ಸೈಬರ್ ವಂಚಕರ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಯಲಹಂಕದಲ್ಲಿದ್ದ ವಿಜಯ್ ಕುಮಾರ್, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಹೀಗಾಗಿ ಷೇರುಗಳನ್ನು ಮಾರಾಟ ಮಾಡಿಸಿ 11 ಕೋಟಿ ರೂ. ಗಳನ್ನು ಸೈಬರ್ ವಂಚಕರು ದೋಚಿದ್ದಾರೆ.