ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ, ಅಂಬೇಡ್ಕರ್ ಅವರ ಭಾವಚಿತ್ರವನ್ನು ವೇದಿಕೆ ಮೇಲೆ ತೆಗೆದುಕೊಂಡು ಬರುವ ವಿಡಿಯೋ ತುಣುಕನ್ನು ಇಟ್ಟುಕೊಂಡು ಸುಳ್ಳು ಸುದ್ದಿ ಹಬ್ಬಿಸಲಾಗಿದೆ, ಅಂತ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ತೇಜೋವಧೆ ಮಾಡುವ ಕಾರಣದಿಂದ ಈ ರೀತಿಯ ಕೃತ್ಯವನ್ನು ಮಾಡಿರುವುದು ಅತ್ಯಂತ ಖಂಡನೀಯ ಅಂತ ಆಕ್ರೋಶ ವ್ಯಕ್ತಪಡಿಸಿದೆ.