ಸಿಡ್ನಿ : ಶಾಪಿಂಗ್ ಮಾಲ್ನಲ್ಲಿ ವ್ಯಕ್ತಿಯೊಬ್ಬ ಸಿಕ್ಕಸಿಕ್ಕವರಿಗೆ ಚೂರಿಯಿಂದ ಇರಿದಿದ್ದಾನೆ. ಈ ಘಟನೆಯಲ್ಲಿ ಸುಮಾರು 6 ಮಂದಿ ಮೃತಪಟ್ಟಿದ್ದಾರೆ. ದಾಳಿ ನಡೆಸಿದ ವ್ಯಕ್ತಿಗೆ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ನ್ಯೂಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ.
ಆಸ್ಟ್ರೇಲಿಯಾದ ವೆಸ್ಟ್ಫೋಲ್ಡ್ ಬೊಂಡಿ ಜಂಕ್ಷನ್ ಮಾಲ್ ನಲ್ಲಿ ಶನಿವಾರ ಮಧ್ಯಾಹ್ನ ದಾಳಿ ನಡೆದಿತ್ತು. ಇನ್ನು ದಾಳಿಯ ಉದ್ದೇಶ ಸ್ಪಷ್ಟವಾಗಿಲ್ಲ. ದುಷ್ಕರ್ಮಿಯನ್ನು ಬಂಧಿಸಲು ಪೊಲೀಸರು ಪ್ರಯತ್ನ ಮಾಡಿದ್ದರು. ಈ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾನೆ. ಕೊನೆಗೆ ಅನಿವಾರ್ಯವಾಗಿ ಆತನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಘಟನೆ ನಡೆದ ವೆಸ್ಟ್ ಫೀಲ್ಡ್ ಬೋಂಡಿ ಮಾಲ್ ಕಾಂಪ್ಲೆಕ್ಸ್ನಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ. ದಾಳಿ ವೇಳೆ 8 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.