ಡಿಕೆ ಶಿವಕುಮಾರ್ ಅವರು ಕರ್ನಾಕಟ ರಾಜ್ಯದ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿ ನಡಿಯುತ್ತಿರುವ ಈ ಹೊತ್ತಿನಲ್ಲಿ ವಿನಯ್ ಗುರೂಜಿ ಅವರ ಈ ಭವಿಷ್ಯ ಸಂಚಲನ ಸೃಷ್ಠಿಸಿದೆ.
ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗೋವುದು ಖಚಿತ. ಯಾಕೆಂದರೇ ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ದುಡಿಡಿದ್ದಾರೆ. ಡಿಕೆ ಶಿವಕುಮಾರ್ ಅವರು ನಾಟಕ ಮಾಡದ ರಾಜಕಾರಣಿಯಾಗಿದ್ದಾರೆ. ಅವರಿಗೆ ನಾಟಕ ಮಾಡುವುದು ಗೊತ್ತಿಲ್ಲ. ಅಂತಹ ನಾಯಕರು ಸಿಎಂ ಆದರೆ ನಮಗೆ ಸಂತೋಷವಾಗುತ್ತದೆ ಎಂದು ವೈಕುಂಠ ಏಕಾದಶಿಯ ದಿನವಾದ ಇಂದು ಭವಿಷ್ಯ ನುಡಿದಿದ್ದಾರೆ.
ಸಿಎಂ ರೇಸ್ನಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಮೊದಲ ಸ್ಥಾನದಲ್ಲಿದೆ. ನಂತರದಲ್ಲಿ ಗೃಹ ಸಚಿವರಾಗಿರುವ ಡಾ. ಜಿ ಪರಮೇಶ್ವರ್ ಅವರ ಹೆಸರು ಕೇಳಿಬರುತ್ತಿದೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಇರುವ ಹೊತ್ತಿನಲ್ಲೇ ಸಿಎಂ ಸ್ಥಾನದ ಬಗ್ಗೆ ಹಲವಾರು ಆಕಾಂಕ್ಷಿಗಳ ಹೆಸರು ಕೇಳಿಬರುತ್ತಿದೆ. ಇದೀಗ ವಿನಯ್ ಗುರೂಜಿ ಅವರ ಈ ಭವಿಷ್ಯ ನಿಜಕ್ಕೂ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದೆ.
ಕಾಂಗ್ರೆಸ್ನಲ್ಲಿ ಒಂದೆಡೆ ಕೆಪಿಸಿಸಿ ಅಧ್ಯಕ್ಷ ಕುರ್ಚಿಗಾಗಿ ಪೈಪೋಟಿ ನಡೆಯುತ್ತಿದ್ದರೆ, ಮತ್ತೊಂದೆಡೆ ಸಿಎಂ ಕುರ್ಚಿಗಾಗಿ ಫೈಟ್ ನಡೆಯುತ್ತಿದೆ. ಮುಖ್ಯವಾಗಿ ಕೇಳಿಬರುತ್ತಿರುವ ಹೆಸರುಗಳೆಂದರೇ ಅವು ಡಾ. ಜಿ ಪರಮೇಶ್ವರ್, ಸತೀಶ್ ಜಾರಕೀಹೊಳಿ, ಮಹಿಳಾ ಕೋಟಾದಲ್ಲಿ ಕೇಳಿಬರುತ್ತಿರುವ ಪ್ರಮುಖ ಹೆಸರೆಂದರೇ ಅದುವೇ ಅಕ್ಕ.. ಲಕ್ಷ್ಮೀ ಹೆಬಗಬಾಳ್ಕರ್.
ಉಪಮುಖ್ಯಮಂತ್ರಿ ಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಆಗಲು ಎಲ್ಲಾ ರೀತಿಯಿಂದಲೂ ಪ್ರಯತ್ನ ಪಡುತ್ತಿದ್ದಾರೆ. ಆದರೆ ಇದೀಗ ಡಿಸಿಎಂ ಡಿಕೆಗೆ ತೀವ್ರವಾಗಿ ಪೈಪೋಟಿ ಒಡ್ಡಲು ಪರಮೇಶ್ವರ್ ರೆಡಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಭಾರೀ ಸುದ್ದಿಯಲ್ಲಿದ್ದದ್ದು 50: 50 ಸರ್ಕಾರ ನಡೆಸುತ್ತಾರೆ ಎಂದು. 5 ವರ್ಷಗಳ ಕಾಂಗ್ರೆಸ್ ಅಡಳಿತದಲ್ಲಿ ಎರಡೂವರೆ ವರ್ಷ ಸಿದ್ದರಾಮಯ್ಯ ಹಾಗೂ ಇನ್ನೂ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸುದ್ದಿ ಹರಿದಾಡಿತ್ತು.
ಆ ಸುದ್ದಿಯ ಪ್ರಕಾರ ಸಿಎಂ ಸಿದ್ದರಾಮಯ್ಯನವರ ಅಧಿಕಾರಾವಧಿ ಮುಗಿಯುತ್ತಾ ಬರುತ್ತಿದೆ. ಅದಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಆಥನ ಗಿಟ್ಟಿಸಿಕೊಳ್ಳಲು ನಾಮುಂದೆ ತಾಮುಂದೆ ಎಂಬಂತೆ ನಾಯಕರು ಸಜ್ಜಾಗುತ್ತಿರುವ ಈ ಹೊತ್ತಿನಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಎದ್ದುನಿಂತಿದ್ದಾರೆ.